Isaiah 60:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನಾಂಗಗಳು ನಿನಗೆ ಬೇಕಾದದ್ದೆಲ್ಲವನ್ನು ಕೊಡುವರು. ಒಂದು ಮಗು ಹೇಗೆ ತಾಯಿಯ ಹಾಲನ್ನು ಕುಡಿಯುವದೋ ಅದೇ ರೀತಿಯಲ್ಲಿ ಅರಸರುಗಳಿಂದ ನೀನು ಧನವನ್ನು ಕುಡಿಯುವಿ. ಆಗ ಯೆಹೋವನಾದ ನಾನೇ ನಿನ್ನನ್ನು ರಕ್ಷಿಸಿದೆನೆಂದು ತಿಳಿದುಕೊಳ್ಳುವಿ. ಆಗ ಯಾಕೋಬ್ಯರ ಮಹಾದೇವರು ನಿಮ್ಮನ್ನು ಕಾಪಾಡುವನೆಂದು ತಿಳಿದುಕೊಳ್ಳುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಜನಾಂಗಗಳ ಮೊಲೆಕೂಸಾಗುವಿ, ರಾಜರು ನಿನಗೆ ಮೊಲೆಯೂಡಿಸುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನೀನು ತಿಳಿದುಕೊಳ್ಳುವಿ.
Kannada BSI Bible 2016
ಅನ್ಯಜನಾಂಗಗಳ ಹಾಲನ್ನು ಹೀರಿಕೊಳ್ಳುವಿ; ಅರಸರ ಮೊಲೆಯನ್ನು ಸಹ ಹೀರಿಕೊಳ್ಳುವಿ; ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋ ಚಕನೂ ಯಾಕೋಬನ ಪರಾಕ್ರಮಿಯೂ ಎಂದು ತಿಳುಕೊಳ್ಳುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಜನಾಂಗಗಳ ಮೊಲೆಕೂಸಾಗುವಿ, ರಾಜರು ನಿನಗೆ ಮೊಲೆಯೂಡಿಸುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನೀನು ತಿಳಿದುಕೊಳ್ಳುವಿ.
Kannada Bible (KNCL) BSI 2016
ಮೊಲೆಯೂಡಿಸುವರು ಜನಾಧಿಪತಿಗಳು ನಿನಗೆ ಮೊಲೆಗೂಸಾಗುವೆ ನೀನು ಜನಾಂಗಗಳಿಗೆ. ಆಗ ತಿಳಿಯುವೆ ನಿನ್ನನುದ್ಧರಿಸಿದ ಸರ್ವೇಶ್ವರ ನಾನೆಂದು ನಿನ್ನ ವಿಮೋಚಕನು, ಯಕೋಬ್ಯರ ಪರಾಕ್ರಮಿಯು ನಾನೆಂದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇತರ ಜನಾಂಗಗಳವರಿಂದ ಹಾಲನ್ನು ಕುಡಿಯುವೆ. ಅರಸರು ನಿನಗೆ ಹಾಲು ಕುಡಿಸುವರು. ಯೆಹೋವನಾದ ನಾನೇ ನಿನ್ನ ರಕ್ಷಕನೂ, ನಿನ್ನ ವಿಮೋಚಕನೂ, ಯಾಕೋಬಿನ ಪರಾಕ್ರಮಿಯೂ ಎಂದು ತಿಳಿದುಕೊಳ್ಳುವೆ.