Isaiah 60:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇನ್ನು ಮುಂದೆ ಮತ್ತೆ ಹಿಂಸಾಚಾರದ ವರ್ತಮಾನವು ನಿನ್ನಲ್ಲಿರುವದಿಲ್ಲ. ಜನರು ಇನ್ನೆಂದಿಗೂ ನಿನ್ನ ಮೇಲೆರಗಿ ನಿನ್ನನ್ನು ದೋಚುವದಿಲ್ಲ. ನಿನ್ನ ಗೋಡೆಗಳಿಗೆ ‘ರಕ್ಷಣೆ’ ಎಂದೂ ದ್ವಾರಗಳಿಗೆ ‘ಸ್ತೋತ್ರ’ವೆಂದೂ ಹೆಸರಿಡುವಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತ್ಯಗಳೊಳಗೆ ಭಂಗನಾಶನಗಳ ವಾರ್ತೆಯೇ ಕೇಳಿಬರುವುದಿಲ್ಲ; ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ತೋತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ.
Kannada BSI Bible 2016
ಬಲಾತ್ಕಾರವೂ ನಿನ್ನ ದೇಶದೊಳಗೆ ಹಾಳಾದದ್ದೂ ನಾಶವೂ ನಿನ್ನ ಮೇರೆ ಗಳಲ್ಲಿ ಕೇಳಲ್ಪಡುವದಿಲ್ಲ; ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿ ಡುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತಗಳೊಳಗೆ ಭಂಗನಾಶನಗಳ ವಾರ್ತೆಯೇ ಕೇಳಬರುವದಿಲ್ಲ; ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ತೋತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ.
Kannada Bible (KNCL) BSI 2016
ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು ನಿನ್ನ ದೇಶದಲಿ ನಾಶವಿನಾಶಗಳ ವಾರ್ತೆಯೇ ಕೇಳಿಬರದು ನಿನ್ನ ಪ್ರಾಂತ್ಯಗಳಲಿ. ಆಗ ಹೆಸರಿಡುವೆ ನಿನ್ನ ಪೌಳಿಗೋಡೆಗೆ ‘ದೈವಮುಕ್ತಿ’ ಎಂದು ನಿನ್ನೀ ಪುರದ್ವಾರಗಳಿಗೆ “ದೈವಸ್ತುತಿ’ ಎಂದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಲಾತ್ಕಾರವೂ, ನಿನ್ನ ದೇಶದೊಳಗೆ ಹಾಳಾದದ್ದೂ, ನಾಶವೂ, ನಿನ್ನ ಮೇರೆಗಳಲ್ಲಿ ಕೇಳಿಬರುವುದಿಲ್ಲ. ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ, ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿಡುವೆ.