Isaiah 60:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಸೂರ್ಯನು ಮತ್ತೆ ಅಸ್ತಮಾನವಾಗುವದಿಲ್ಲ. ನಿನ್ನ ಚಂದ್ರನು ಮತ್ತೆಂದಿಗೂ ಕಪ್ಪಾಗುವದಿಲ್ಲ. ಯಾಕೆಂದರೆ ಯೆಹೋವನು ನಿನ್ನ ನಿರಂತರದ ಬೆಳಕಾಗಿರುವನು. ನಿನ್ನ ದುಃಖದ ಕಾಲವು ಅಂತ್ಯವಾಗುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಸೂರ್ಯನು ಇನ್ನು ಮುಳುಗನು, ನಿನ್ನ ಚಂದ್ರನು ತೊಲಗನು; ಯೆಹೋವನೇ ನಿನಗೆ ನಿತ್ಯಪ್ರಕಾಶವಾಗಿರುವನು, ನೀನು ದುಃಖಿಸುವ ದಿನಗಳು ಕೊನೆಯಾಗುವುದು.
Kannada BSI Bible 2016
ನಿನ್ನ ಸೂರ್ಯನು ಅಸ್ತಮಿಸು ವದಿಲ್ಲ, ನಿನ್ನ ಚಂದ್ರನು ಕಾಣದೆ ಹೋಗುವದಿಲ್ಲ; ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು ನಿನ್ನ ದುಃಖದ ದಿನಗಳು ಮುಗಿದುಹೋಗಿರುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಸೂರ್ಯನು ಇನ್ನು ಮುಣುಗನು, ನಿನ್ನ ಚಂದ್ರನು ತೊಲಗನು; ಯೆಹೋವನೇ ನಿನಗೆ ನಿತ್ಯಪ್ರಕಾಶವಾಗಿರುವನು, ನೀನು ದುಃಖಿಸುವ ದಿನಗಳು ಕೊನೆಗಾಣುವವು.
Kannada Bible (KNCL) BSI 2016
ನಿನ್ನ ಸೂರ್ಯನು ಇನ್ನು ತೊಲಗನು. ನಿನ್ನ ಚಂದ್ರನು ಬಿಟ್ಟು ತೊಲಗನು. ಸರ್ವೇಶ್ವರನೇ ನಿನಗೆ ನಿತ್ಯಜ್ಯೋತಿ ನಿನ್ನ ದುಃಖ ದಿನಗಳಿಗಿದೆ ಸಮಾಪ್ತಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಸೂರ್ಯನು ಅಸ್ತಮಿಸುವುದಿಲ್ಲ. ನಿನ್ನ ಚಂದ್ರನು ಕಾಣದೆ ಹೋಗುವುದಿಲ್ಲ. ಏಕೆಂದರೆ ಯೆಹೋವ ದೇವರು ನಿನಗೆ ನಿತ್ಯವಾದ ಬೆಳಕಾಗಿರುವರು. ನೀನು ದುಃಖಿಸುವ ದಿನಗಳು ಸಮಾಪ್ತಿಯಾಗುವುದು.