Isaiah 60:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಜನರೆಲ್ಲಾ ನೀತಿಯಲ್ಲಿ ಜೀವಿಸುವರು. ಅವರು ಭೂಮಿಗೆ ಶಾಶ್ವತವಾದ ಬಾಧ್ಯಸ್ತರಾಗುವರು. ಆ ಜನರನ್ನು ನಾನೇ ನಿರ್ಮಿಸಿದೆನು. ನಾನು ನನ್ನ ಸ್ವಂತ ಕೈಗಳಿಂದ ನಿರ್ಮಿಸಿದ ಆಶ್ಚರ್ಯಕರವಾದ ಸಸಿಗಳಂತೆ ಅವರಿರುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ, ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.
Kannada BSI Bible 2016
ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.
Kannada Bible (KNCL) BSI 2016
ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಜನರೆಲ್ಲರೂ ನೀತಿವಂತರಾಗಿರುವರು. ದೇಶವನ್ನು ಸದಾಕಾಲಕ್ಕೆ ಸ್ವಾಧೀನಮಾಡಿಕೊಳ್ಳುವರು. ನಾನು ಮಹಿಮೆ ಹೊಂದುವುದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ, ನನ್ನ ಕೈ ಸೃಷ್ಟಿಯೂ ಆಗಿರುವರು.