Isaiah 60:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆಗ ನೀನು ನಿನ್ನ ಜನರನ್ನು ನೋಡುವೆ. ನಿನ್ನ ಮುಖವು ಸಂತೋಷದಿಂದ ಪ್ರಕಾಶಿಸುವದು. ಮೊದಲು ನೀನು ಭಯಪಡುವೆ. ಆ ಬಳಿಕ ನೀನು ಉತ್ಸಾಹಪಡುವೆ. ಸಮುದ್ರದಾಚೆ ಇರುವ ಐಶ್ವರ್ಯವು ನಿನ್ನ ಮುಂದೆ ರಾಶಿ ಹಾಕಲ್ಪಡುವದು. ಜನಾಂಗಗಳ ನಿಕ್ಷೇಪವು ನಿನಗೆ ದೊರೆಯುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಅವರನ್ನು ನೋಡಿ ಸಂತೋಷ ಸಂಭ್ರಮ ಪಡುವೆ, ನಿನ್ನ ಹೃದಯವು ಹರ್ಷಿಸಿ ಉಲ್ಲಾಸಿಸುವುದು; ಏಕೆಂದರೆ ಸಮುದ್ರ ವ್ಯಾಪಾರದ ಸಮೃದ್ಧಿಯು ನಿನಗೆ ಅತಿಯಾದ ಲಾಭತರುವುದು. ಕಡೆಗೆ ತಿರುಗುವುದು, ಜನಾಂಗಗಳ ಐಶ್ವರ್ಯವು ನಿನಗೆ ದೊರೆಯುವುದು.
Kannada BSI Bible 2016
ಆಗ ನೀನು ಅದನ್ನು ನೋಡುವಿ, ನೀವು ಗುಂಪು ಗುಂಪಾಗಿ ಹೋಗುವಿರಿ. ನಿನ್ನ ಹೃದಯವು ಹೆದರಿ ವಿಶಾಲವಾಗು ವದು; ಸಮುದ್ರದ (ವ್ಯಾಪಾರದ) ಸಮೃದ್ಧಿಯು ನಿನ್ನ ಕಡೆಗೆ ತಿರುಗಿಕೊಳ್ಳುವದು; ಅನ್ಯಜನಾಂಗದ ಸೇನಾ ಬಲವು ನಿನ್ನ ಬಳಿಗೆ ಬರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ನೋಡಿ ಕಳೆಗೊಳ್ಳುವಿ, ನಿನ್ನ ಹೃದಯವು ಅದರುತ್ತಾ ಉಬ್ಬುವದು; ಏಕಂದರೆ ಸಮುದ್ರವ್ಯಾಪಾರ ಸಮೃದ್ಧಿಯು ನಿನ್ನ ಕಡೆಗೆ ತಿರುಗುವದು, ಜನಾಂಗಗಳ ಐಶ್ವರ್ಯವು ನಿನಗೆ ದೊರೆಯುವದು.
Kannada Bible (KNCL) BSI 2016
ಇದನ್ನು ನೋಡಿ ನೀ ಬೆಳಗುವೆ ಕಾಂತಿಯಿಂದ ಉಬ್ಬುವುದು ನಿನ್ನ ಎದೆ ಆನಂದದಿಂದ. ಹರಿಯುವುದು ನಿನ್ನೆಡೆಗೆ ಸಮುದ್ರ ವ್ಯಾಪಾರ ಸಮೃದ್ಧಿ ದೊರಕುವುದು ನಿನಗೆ ಅನ್ಯಜನಾಂಗಗಳ ಆಸ್ತಿಪಾಸ್ತಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ನೋಡಿ ಕಳೆಗೊಳ್ಳುವಿ, ನಿನ್ನ ಹೃದಯವು ಅದರುತ್ತಾ ಉಬ್ಬುವುದು, ಏಕೆಂದರೆ ಸಮುದ್ರದ ಸಮೃದ್ಧಿಯು ನಿನ್ನ ಕಡೆಗೆ ತಿರುಗಿಕೊಳ್ಳುವುದು. ಇತರ ಜನಾಂಗಗಳ ಆಸ್ತಿಯು ನಿನ್ನ ಬಳಿಗೆ ಬರುವುದು.