Isaiah 60:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮಿದ್ಯಾನಿನ ಮತ್ತು ಏಫದ ಒಂಟೆಗಳ ಹಿಂಡು ರಾಜ್ಯವನ್ನು ದಾಟುವವು. ಶೆಬ ರಾಜ್ಯದ ಒಂಟೆಗಳ ಸಾಲು ಚಿನ್ನ ಮತ್ತು ಧೂಪವನ್ನು ಹೊತ್ತುಕೊಂಡು ನಿನ್ನ ಬಳಿಗೆ ಬರುವವು. ಜನರು ಯೆಹೋವನಿಗೆ ಸ್ತೋತ್ರಗಾನ ಹಾಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉಷ್ಟ್ರಸಮೂಹವೂ, ಮಿದ್ಯಾನಿನ ಮತ್ತು ಏಫದ ಪ್ರಾಯದ ಒಂಟೆಗಳೂ ನಿನ್ನಲ್ಲಿ ತುಂಬಿರುವವು; ಅವೆಲ್ಲವೂ ಬಂಗಾರವನ್ನೂ, ಧೂಪವನ್ನೂ ತೆಗೆದುಕೊಂಡು ಶೆಬದಿಂದ ಬಂದು ಯೆಹೋವನ ಸ್ತುತ್ಯಕೃತ್ಯಗಳನ್ನು ಸಾರುವರು.
Kannada BSI Bible 2016
ಒಂಟೆಗಳ ಸಮೂಹವು ನಿನ್ನನ್ನು ಮುಚ್ಚುವದು; ಮಿದ್ಯಾನಿನ, ಏಫದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೇಬದಿಂದಲೂ ಬರುವವು; ಅವು ಬಂಗಾರವನ್ನೂ ಧೂಪವನ್ನೂ ತರುವವು; ಅವು ಕರ್ತನ ಸ್ತೋತ್ರ ಗಳನ್ನು ಸಾರುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಉಷ್ಟ್ರಸಮೂಹವೂ ವಿುದ್ಯಾನಿನ ಮತ್ತು ಏಫದ ಪ್ರಾಯದ ಒಂಟೆಗಳೂ ನಿನ್ನಲ್ಲಿ ತುಂಬಿರುವವು; ಆ ಸ್ವಾರ್ಥವಾಹರೆಲ್ಲಾ ಕನಕವನ್ನೂ ಧೂಪವನ್ನೂ ತೆಗೆದುಕೊಂಡು ಶೆಬದಿಂದ ಬಂದು ಯೆಹೋವನ ಸ್ತುತ್ಯಕೃತ್ಯಗಳನ್ನು ಸಾರುವರು.
Kannada Bible (KNCL) BSI 2016
ತುಂಬಿರುವುವು ನಿನ್ನೊಳು ಒಂಟೆಗಳ ಗುಂಪುಗಳು ಮಿದ್ಯಾನಿನ, ಏಫದ ಪ್ರಾಯದ ಒಂಟೆಗಳು. ಬರುವರೆಲ್ಲರು ಶೆಬದಿಂದ, ತರುವರು ಬಂಗಾರ, ಧೂಪಗಳನು ಸಾರುವರೆಲ್ಲರು ಸರ್ವೇಶ್ವರನ ಸ್ತುತ್ಯಕಾರ್ಯಗಳನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂಟೆಗಳ ಸಮೂಹವು ನಿನ್ನ ದೇಶದಲ್ಲಿ ತುಂಬಿಕೊಳ್ಳುವುದು. ಮಿದ್ಯಾನಿನ ಏಫಾದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೆಬದಿಂದಲೂ ಬರುವುವು. ಬಂಗಾರವನ್ನೂ, ಧೂಪವನ್ನೂ ತರುವುವು. ಯೆಹೋವ ದೇವರ ಸ್ತೋತ್ರಗಳನ್ನು ಸಾರುವುವು.