Isaiah 60:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ಕೇದಾರಿನ ಎಲ್ಲಾ ಕುರಿಗಳನ್ನು ಒಟ್ಟುಗೂಡಿಸಿ ನಿನಗೆ ಕೊಡುವರು. ನೆಬಾಯೋತಿನಿಂದ ಟಗರುಗಳನ್ನು ನಿನಗೆ ತರುವರು. ನೀನು ನಿನ್ನ ವೇದಿಕೆಯ ಮೇಲೆ ಅವುಗಳನ್ನು ಯಜ್ಞಮಾಡುವೆ. ಆಗ ನಾನು ಸ್ವೀಕರಿಸುವೆನು. ನನ್ನ ಸುಂದರವಾದ ಆಲಯವನ್ನು ಇನ್ನೂ ಸೌಂದರ್ಯಗೊಳಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೇದಾರಿನ ಹಿಂಡುಗಳೆಲ್ಲಾ ನಿನ್ನಲ್ಲಿ ಕೂಡುವವು; ನೆಬಾಯೋತಿನ ಟಗರುಗಳು ನೀನು ಮಾಡುವ ಯಜ್ಞಕ್ಕೆ ಅನುಕೂಲಿಸುವವು. ಅವು ನನ್ನ ಯಜ್ಞವೇದಿಯ ಮೇಲೆ ಸಮರ್ಪಕವಾಗಿ ಒಯ್ಯಲ್ಪಡುವವು; ಮಹಿಮೆಯಿಂದ ಕೂಡಿದ ನನ್ನ ಆಲಯವನ್ನು ಘನಪಡಿಸುವೆನು.
Kannada BSI Bible 2016
ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೇದಾರಿನ ಹಿಂಡುಗಳೆಲ್ಲಾ ನಿನ್ನಲ್ಲಿ ಕೂಡುವವು; ನೆಬಾಯೋತಿನ ಟಗರುಗಳು ನೀನು ಮಾಡುವ ಯಜ್ಞಕ್ಕೆ ಅನುಕೂಲಿಸಿ ನನ್ನ ಯಜ್ಞವೇದಿಯ ಮೇಲೆ ಸಮರ್ಪಕವಾಗಿ ಒಯ್ಯಲ್ಪಡುವವು; ನನ್ನ ಸುಂದರಾಲಯವನ್ನು ಚಂದಗೊಳಿಸುವೆನು.
Kannada Bible (KNCL) BSI 2016
ನಿನ್ನಲ್ಲಿ ಕೂಡುವುವು ಕೇದಾರಿನ ಸಕಲ ಮಂದೆಗಳು ಬಲಿಯರ್ಪಣೆಗೊದಗುವುವು ನೆಬಾಯೋತಿನ ಟಗರುಗಳು. ಏರುವುವು ನನಗೆ ಸಮರ್ಪಕವಾದ ಹೋಮವಾಗಿ ಬಲಿಪೀಠವನು. ಚಂದಗೊಳಿಸುವೆನು ನನ್ನ ಸುಂದರವಾದ ಆಲಯವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೇದಾರಿನ ಮಂದೆಗಳೆಲ್ಲಾ ನಿನ್ನಲ್ಲಿ ಸೇರಿಬರುವುವು. ನೆಬಾಯೋತಿನ ಟಗರುಗಳು ನಿನ್ನನ್ನು ಸೇವಿಸುವುವು. ನನ್ನ ಬಲಿಪೀಠದ ಮೇಲೆ ಮೆಚ್ಚಿಕೆಯಿಂದ ಏರುವುವು. ನನ್ನ ಮಹಿಮೆಯ ಆಲಯವನ್ನು ಘನಪಡಿಸುವೆನು.