Isaiah 60:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೂರ ಪ್ರಾಂತ್ಯಗಳು ನನಗಾಗಿ ಕಾದಿವೆ. ದೊಡ್ಡ ಸರಕು ಸಾಗಿಸುವ ಹಡಗುಗಳು ಹೊರಡಲು ತಯಾರಾಗಿವೆ. ಈ ಹಡಗುಗಳು ದೂರ ಪ್ರಾಂತ್ಯದಲ್ಲಿರುವ ನಿನ್ನ ಮಕ್ಕಳನ್ನು ಕರೆತರಲು ತಯಾರಾಗಿವೆ. ಅವರು ಬೆಳ್ಳಿಬಂಗಾರಗಳನ್ನು ತಮ್ಮೊಂದಿಗೆ ತಂದು ಇಸ್ರೇಲಿನ ಪರಿಶುದ್ಧನಾದ ಯೆಹೋವನನ್ನು ಘನಪಡಿಸುವರು. ಯೆಹೋವನು ನಿನಗೆ ಆಶ್ಚರ್ಯಕರವಾದ ಸಂಗತಿಗಳನ್ನು ಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ನಿನ್ನನ್ನು ವೈಭವಪಡಿಸಿರುವುದನ್ನು ಕೇಳಿ ತಾರ್ಷೀಷಿನ ಹಡಗುಗಳು, ನಿನ್ನ ದೇವರಾದ ಯೆಹೋವನ ನಾಮಮಹತ್ತಿನ ನಿಧಿಯೂ, ಇಸ್ರಾಯೇಲಿನ ಸದಮಲಸ್ವಾಮಿಯ ಸನ್ನಿಧಿಯ ಸ್ಥಾನಕ್ಕೆ ನಿನ್ನ ಮಕ್ಕಳನ್ನು ಅವರ ಬೆಳ್ಳಿ ಬಂಗಾರಗಳ ಸಮೇತ ದೂರದಿಂದ ತರುವುದರಲ್ಲಿ ಮುಂದಾಗುತ್ತಿವೆ.
Kannada BSI Bible 2016
ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ನಿನ್ನನ್ನು ವೈಭವಪಡಿಸಿರುವದನ್ನು ಕೇಳಿ ತಾರ್ಷೀಷಿನ ಹಡಗುಗಳು ನಿನ್ನ ದೇವರಾದ ಯೆಹೋವನ ನಾಮಮಹತ್ತಿನ ವಿಧಿಯೂ ಇಸ್ರಾಯೇಲಿನ ಸದಮಲಸ್ವಾವಿುಯ ಸನ್ನಿಧಿಯೂ ಆದ ಸ್ಥಾನಕ್ಕೆ ನಿನ್ನ ಮಕ್ಕಳನ್ನು ಅವರ ಬೆಳ್ಳಿ ಬಂಗಾರಗಳ ಸಮೇತ ದೂರದಿಂದ ತರುವದರಲ್ಲಿ ಮುಂದಾಗುತ್ತಿವೆ.
Kannada Bible (KNCL) BSI 2016
ನಿರೀಕ್ಷಿಸುತ್ತಿಹರು ನನ್ನನು ದೂರದ ನಿವಾಸಿಗಳು ಮುಂದಾಗಿ ಬರುತಿಹವು ತಾರ್ಷೀಷಿನ ಹಡಗುಗಳು, ನಿನ್ನ ದೇವರಾದ ಸರ್ವೇಶ್ವರನ ಶ್ರೀನಾಮ ನಿಧಿಯಾದ ಇಲ್ಲಿಗೆ; ನಿನ್ನ ಘನಪಡಿಸಿದ ಇಸ್ರಯೇಲಿನ ಪರಮಪಾವನನ ಸನ್ನಿಧಿಗೆ. ಹೊತ್ತು ತರುತಿಹರು ನಿನ್ನ ಮಕ್ಕಳನು ಜೊತೆಗೆ ಅವರ ಬೆಳ್ಳಿಬಂಗಾರಗಳನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ ನನಗೋಸ್ಕರ ದೂರದಿಂದ ನಿನ್ನ ಪುತ್ರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಯೆಹೋವ ದೇವರ ಬಳಿಗೂ, ನಿನ್ನನ್ನು ವೈಭವದಿಂದ ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವುದರಲ್ಲಿ ಮುಂದಾಗುತ್ತಿವೆ.