Isaiah 61:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನ ಸೇವಕನು ಹೇಳುವುದೇನೆಂದರೆ, “ಒಡೆಯನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ. ಬಡವರಿಗೆ ಸುವಾರ್ತೆಯನ್ನು ತಿಳಿಸಲೂ ದುಃಖಿಸುವವರನ್ನು ಸಂತೈಸಲೂ ಆತನು ನನ್ನನ್ನು ಆರಿಸಿರುತ್ತಾನೆ. ಸೆರೆಹಿಡಿಯಲ್ಪಟ್ಟಿರುವವರನ್ನು ಸ್ವತಂತ್ರರಾದರೆಂದು ಹೇಳಲೂ ಕೈದಿಗಳನ್ನು ಬಿಡುಗಡೆ ಮಾಡಲ್ಪಟ್ಟವರೆಂದು ಹೇಳಲೂ ದೇವರು ನನ್ನನ್ನು ಕಳುಹಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,
Kannada BSI Bible 2016
ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವದಕ್ಕೂ ಸೆರೆಯವರಿಗೆ ಬಿಡುಗಡೆಯಾಗುವದನ್ನು, ಬಂದಿಗಳಿಗೆ [ಕದ] ತೆರೆಯುವದನ್ನು ಪ್ರಸಿದ್ಧಿಪಡಿಸುವದಕ್ಕೂ
Kannada Bible (KNCL) BSI 2016
ನನ್ನ ಮೇಲಿದೆ ಸರ್ವೇಶ್ವರ ಸ್ವಾಮಿಯ ಆತ್ಮ; ನನಗೆ ಅಭಿಷೇಕಮಾಡಿ, ಕಳುಹಿಸಿಹನು ಆತ: ದೀನದಲಿತರಿಗೆ ಶುಭಸಂದೇಶ ಬೋಧಿಸಲೆಂದೆ ಮನನೊಂದವರನು ಸಂತೈಸಿ ಗುಣಪಡಿಸಲೆಂದೆ ಬಂಧಿತರಿಗೆ ಬಿಡುಗಡೆಯನು ಪ್ರಕಟಿಸಲೆಂದೆ; ಸೆರೆಯಾಳುಗಳಿಗೆ ಬಂಧವಿಮುಕ್ತಿಯಾಗುವುದನು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಾರ್ವಭೌಮ ಯೆಹೋವ ದೇವರ ಆತ್ಮರು ನನ್ನ ಮೇಲೆ ಇದ್ದಾರೆ. ಏಕೆಂದರೆ ಯೆಹೋವ ದೇವರು ನನ್ನನ್ನು ಬಡವರಿಗೆ ಶುಭಸಂದೇಶವನ್ನು ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಮುರಿದ ಹೃದಯಗಳನ್ನು ಕಟ್ಟುವುದಕ್ಕೂ, ಬಂಧಿತರಿಗೆ ಸ್ವಾತಂತ್ರ್ಯವನ್ನು ಘೋಷಿಸಲು ಮತ್ತು ಕೈದಿಗಳಿಗೆ ಕತ್ತಲೆಯಿಂದ ಬಿಡುಗಡೆ ಮಾಡಲು