Isaiah 61:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಭೂಮಿಯು ಸಸಿಗಳನ್ನು ಬೆಳೆಸುತ್ತದೆ. ಜನರು ತೋಟದಲ್ಲಿ ಬೀಜ ಬಿತ್ತುವರು. ತೋಟವು ಬೀಜವನ್ನು ಬೆಳೆಸುತ್ತದೆ. ಅದೇ ರೀತಿಯಲ್ಲಿ ಯೆಹೋವನು ಎಲ್ಲಾ ಜನಾಂಗಗಳಲ್ಲಿ ನೀತಿಯನ್ನೂ ಸ್ತೋತ್ರವನ್ನೂ ಬೆಳೆಸುತ್ತಾನೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಭೂಮಿಯು ತನ್ನೊಳಗಿಂದ ಮೊಳಕೆಯನ್ನು ಹೊರಡಿಸುವಂತೆ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೆ, ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಮತ್ತು ಸ್ತೋತ್ರವನ್ನೂ ಮೊಳೆತು ಅಭಿವೃದ್ಧಿ ಹೊಂದುವಂತೆ ಮಾಡುವನು.
Kannada BSI Bible 2016
ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಭೂವಿುಯು ತನ್ನೊಳಗಿಂದ ಮೊಳಿಕೆಯನ್ನು ಹೊರಡಿಸುವಂತೆಯೂ ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೂ ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಸ್ತೋತ್ರವನ್ನೂ ಮೊಳೆಯಿಸುವನು.
Kannada Bible (KNCL) BSI 2016
ಬುವಿಯು ತನ್ನಿಂದ ಬೀಜವನು ಮೊಳೆಯಿಸುವಂತೆ ತೋಟವು ತನ್ನೊಳು ಸಸಿಯನು ಬೆಳೆಸುವಂತೆ ಸ್ವಾಮಿ ಸರ್ವೇಶ್ವರ, ಸಮಸ್ತ ರಾಷ್ಟ್ರಗಳ ಮುಂದೆ ವೃದ್ಧಿಗೊಳಿಸುವನು ಸದ್ಧರ್ಮವನೆ, ಸ್ತುತಿಸ್ತೋತ್ರವನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವುದೋ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳೆಯಿಸುವುದೋ, ಹಾಗೆಯೇ ಸಾರ್ವಭೌಮ ಯೆಹೋವ ದೇವರು ನೀತಿಯನ್ನೂ, ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವರು.