Isaiah 61:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.
Kannada BSI Bible 2016
ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ದುಃಖಿತರೆಲ್ಲರನ್ನು ಸಂತೈಸುವದಕ್ಕೂ ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವದು.
Kannada Bible (KNCL) BSI 2016
ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚೀಯೋನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯದ ಕಿರೀಟವನ್ನೂ, ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ, ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರ ಎಂಬ ಮೇಲಂಗಿಯನ್ನು ಕೊಡುವುದಕ್ಕೂ ನನ್ನನ್ನು ನೇಮಿಸಿದ್ದಾರೆ. ಆಗ ಅವರಿಗೆ ನೀತಿವೃಕ್ಷಗಳೆಂದೂ, ಯೆಹೋವ ದೇವರು ತಾನು ಮಹಿಮೆ ಹೊಂದುವುದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವುದು.