Isaiah 61:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲ್ಲಾ ಜನಾಂಗಗಳವರು ನನ್ನ ಜನರನ್ನೂ ನನ್ನ ದೇಶದ ಮಕ್ಕಳನ್ನೂ ತಿಳಿದುಕೊಳ್ಳುವರು. ಅವರನ್ನು ಜನರು ನೋಡಿದಾಗ ಯೆಹೋವನು ಅವರನ್ನು ಆಶೀರ್ವದಿಸುತ್ತಿದ್ದಾನೆ ಎಂದು ತಿಳಿಯುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರ ಸಂತಾನವು ಜನಾಂಗಗಳಲ್ಲಿ ಪ್ರಖ್ಯಾತವಾಗುವುದು, ಇವರ ಸಂತತಿಯು ಅನ್ಯದೇಶೀಯರಲ್ಲಿ ಹೆಸರುಗೊಳ್ಳುವುದು. ಇವರನ್ನು ನೋಡುವವರೆಲ್ಲರು ಯೆಹೋವನು ಆಶೀರ್ವದಿಸಿದ ವಂಶವು ಇದೇ ಎಂದು ಒಪ್ಪಿಕೊಳ್ಳುವರು.
Kannada BSI Bible 2016
ಆಗ ಅವರ ಸಂತಾನವು ಅನ್ಯ ಜನಾಂಗಗಳಲ್ಲಿಯೂ ಅವರಿಂದಾದ ಸಂತತಿಯು ಜನ ಗಳ ಮಧ್ಯದಲ್ಲಿಯೂ ತಿಳಿಸಲ್ಪಡುವದು; ಅವರನ್ನು ನೋಡುವವರೆಲ್ಲರೂ--ಅವರೇ ಕರ್ತನು ಆಶೀರ್ವದಿ ಸಿದ ಸಂತಾನವೆಂದು ಒಪ್ಪಿಕೊಳ್ಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರ ಸಂತಾನವು ಜನಾಂಗಗಳಲ್ಲಿ ಪ್ರಖ್ಯಾತವಾಗುವದು, ಇವರ ಸಂತತಿಯು ಅನ್ಯದೇಶೀಯರಲ್ಲಿ ಹೆಸರುಗೊಳ್ಳುವದು; ಇವರನ್ನು ನೋಡುವವರೆಲ್ಲರು ಯೆಹೋವನು ಆಶೀರ್ವದಿಸಿದ ವಂಶವು ಇದೇ ಎಂದು ಒಪ್ಪಿಕೊಳ್ಳುವರು.
Kannada Bible (KNCL) BSI 2016
ಪ್ರಖ್ಯಾತವಾಗುವುದು ಇವರ ಸಂತಾನ ವಿಶ್ವದಲ್ಲೆಲ್ಲ ಹೆಸರುವಾಸಿಯಾಗುವುದು ಇವರ ಸಂತತಿ ಅನ್ಯರಾಷ್ಟ್ರಗಳಲ್ಲೆಲ್ಲ. ಲಭಿಸುವುದು ಸರ್ವೇಶ್ವರನ ಆಶೀರ್ವಾದ ಈ ಜನತೆಗೆ ಖಚಿತವಾಗುವುದಿದು ನೋಡುವವರೆಲ್ಲರಿಗೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರ ಸಂತಾನವು ಇತರ ಜನಾಂಗಗಳಲ್ಲಿ ಪ್ರಸಿದ್ಧವಾಗುವುದು. ಅವರಿಂದಾದ ಉತ್ಪತ್ತಿ ಜನರ ಮಧ್ಯದಲ್ಲಿ ತಿಳಿಸಲಾಗುವುದು. ಅವರನ್ನು ನೋಡುವವರೆಲ್ಲರೂ, ಅವರೇ ಯೆಹೋವ ದೇವರು ಆಶೀರ್ವದಿಸಿದ ಸಂತಾನ ಎಂದು ಒಪ್ಪಿಕೊಳ್ಳುವರು.