Isaiah 62:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನ ಜನರು “ಪವಿತ್ರಜನ”ರೆಂದೂ, “ಯೆಹೋವನಿಂದ ರಕ್ಷಿಸಲ್ಪಟ್ಟವ”ರೆಂದೂ ಕರೆಯಲ್ಪಡುವರು. ಜೆರುಸಲೇಮ್, “ದೇವರಿಗೆ ಬೇಕಾದ ಪಟ್ಟಣ”ವೆಂದೂ, “ದೇವರಿರುವ ಪಟ್ಟಣ”ವೆಂದೂ ಕರೆಯಲ್ಪಡುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಜನರು, “ಪರಿಶುದ್ಧಜನರು, ಯೆಹೋವನು ವಿಮೋಚಿಸಿದವರು” ಎಂದು ಅನ್ನಿಸಿಕೊಳ್ಳುವರು, ನಿನಗೋ, “ಪತಿಯು ವರಿಸಿ, ತ್ಯಜಿಸದ ಪಟ್ಟಣ” ಎಂದು ಹೆಸರು ಬರುವುದು.
Kannada BSI Bible 2016
ಆಗ ಅವರು--ಪರಿಶುದ್ಧ ಜನರೂ ಕರ್ತನು ವಿಮೋಚಿಸಿದ ವರೂ ಎಂದು ಕರೆಯಲ್ಪಡುವರು; ನೀನು ಕಂಡು ಕೊಳ್ಳಲ್ಪಟ್ಟವಳೂ ತೊರೆಯಲ್ಪಡದ ಪಟ್ಟಣವೂ ಎಂದು ಕರೆಯಲ್ಪಡುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಜನರು ಪರಿಶುದ್ಧಜನರು, ಯೆಹೋವನು ವಿಮೋಚಿಸಿದವರು ಎಂದು ಅನ್ನಿಸಿಕೊಳ್ಳುವರು, ನಿನಗೋ ಪತಿಯು ವರಿಸಿ ತ್ಯಜಿಸದ ಪುರಿ ಎಂದು ಹೆಸರು ಬರುವದು.
Kannada Bible (KNCL) BSI 2016
‘ಪವಿತ್ರ ಪ್ರಜೆ’ ಎನಿಸಿಕೊಳ್ಳುವುದು ನಿಮ್ಮ ಜನತೆ ‘ಸರ್ವೇಶ್ವರ ಸ್ವಾಮಿಯೇ ಉದ್ಧರಿಸಿದ ಜನತೆ’. ನಿನ್ನ ಹೆಸರೋ, ‘ಪ್ರಾಪ್ತ ನಗರಿ’ ಪತಿ ವರಿಸಿ ಕೈ ಬಿಡದ ಪುರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು, ಪರಿಶುದ್ಧ ಜನರೂ, ಯೆಹೋವ ದೇವರು ವಿಮೋಚಿಸಿದವರೂ ಎಂದು ಎನಿಸಿಕೊಳ್ಳುವರು ನಿನಗೆ ಹುಡುಕಿದ ಹಾಗೂ ಕೈ ಬಿಡದ ಪಟ್ಟಣ, ಎಂದು ಹೆಸರು ಬರುವುದು.