Isaiah 62:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ತೊರೆದ ಜನಾಂಗವೆಂದೂ ದೇವರು ನಾಶಮಾಡಿದ ದೇಶವೆಂದೂ ನಿನ್ನನ್ನು ಇನ್ನು ಮುಂದೆ ಯಾರೂ ಕರೆಯುವದಿಲ್ಲ. ‘ದೇವರ ಪ್ರಿಯ ಜನರು’ ಎಂದು ನೀನು ಕರೆಯಲ್ಪಡುವಿ. ನಿನ್ನ ದೇಶವು ‘ದೇವರ ಮದಲಗಿತ್ತಿ’ ಎಂದು ಕರೆಯಲ್ಪಡುವದು. ಯಾಕೆಂದರೆ ಯೆಹೋವನು ನಿನ್ನನ್ನು ಪ್ರೀತಿಸುತ್ತಾನೆ; ನಿನ್ನ ದೇಶವು ಆತನಿಗೆ ಸೇರಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಇನ್ನು ಮೇಲೆ “ತ್ಯಜಿಸಲ್ಪಟ್ಟವಳು” ಎನಿಸಿಕೊಳ್ಳುವುದಿಲ್ಲ, ನಿನ್ನ ಸೀಮೆಗೆ “ನಿರ್ಜನ ಪ್ರದೇಶ” ಎಂಬ ಹೆಸರು ಇನ್ನು ಇರದು; ನೀನು “ನನ್ನ ಉಲ್ಲಾಸಿನಿ ” ಎನಿಸಿಕೊಳ್ಳುವಿ, ನಿನ್ನ ಸೀಮೆಗೆ “ವಿವಾಹಿತೆ ” ಎಂಬ ಹೆಸರಾಗುವುದು; ಏಕೆಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವುದು.
Kannada BSI Bible 2016
ಇನ್ನು ಮೇಲೆ ನೀನು ಬಿಡಲ್ಪಟ್ಟವಳೆಂದು ಹೇಳಲ್ಪಡುವದಿಲ್ಲ, ಇಲ್ಲವೆ ನಿನ್ನ ದೇಶಕ್ಕೆ ಹಾಳಾದದ್ದೆಂದು ಹೇಳಲ್ಪಡುವದಿಲ್ಲ: ಆದರೆ ನೀನು (ಹೆಫ್ಜೀಬಾ) ಮೆಚ್ಚಿದವಳೆಂದೂ ನಿನ್ನ ದೇಶವು (ಬೆಯೂಲಾ) ಮದುವೆಯಾದದ್ದೆಂದೂ ಕರೆಯಲ್ಪ ಡುವದು; ಯಾಕಂದರೆ ಕರ್ತನು ನಿನ್ನಲ್ಲಿ ಉಲ್ಲಾಸಿಸು ವನು; ನಿನ್ನ ದೇಶವು ಮದುವೆಯಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಇನ್ನು ಮೇಲೆ ಗಂಡಬಿಟ್ಟವಳು ಎನಿಸಿಕೊಳ್ಳೆ, ನಿನ್ನ ಸೀಮೆಗೆ ಬಂಜೆ ಎಂಬ ಹೆಸರು ಇನ್ನಿರದು; ನೀನು ಎನ್ನುಲ್ಲಾಸಿನಿ ಎನಿಸಿಕೊಳ್ಳುವಿ, ನಿನ್ನ ಸೀಮೆಗೆ ವಿವಾಹಿತೆ ಎಂಬ ಹೆಸರಾಗುವದು; ಏಕಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವದು,
Kannada Bible (KNCL) BSI 2016
“ಎನ್ನ ಮನದನ್ನೆ” ಎನಿಸಿಕೊಳ್ಳುವೆ ನೀನು “ಸುವಿವಾಹಿತೆ” ಎನಿಸಿಕೊಳ್ಳುವುದು ನಿನ್ನ ನಾಡು. ನಿನ್ನಲ್ಲಿದೆ ಉಲ್ಲಾಸ ಸರ್ವೇಶ್ವರನಿಗೆ ವಿವಾಹವಾಗುವುದಿದೆ ನಿನ್ನ ನಾಡಿಗೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇನ್ನು ಮೇಲೆ ನೀನು ಗಂಡಬಿಟ್ಟವಳೆಂದು ಎನಿಸಿಕೊಳ್ಳುವುದಿಲ್ಲ ನಿನ್ನ ದೇಶಕ್ಕೆ ಹಾಳಾದದ್ದು ಎಂಬ ಹೆಸರೂ ಇರುವುದಿಲ್ಲ. ಆದರೆ ನೀನು ಹೆಪ್ಸಿಬಾ ಎಂದೂ ನಿನ್ನ ದೇಶಕ್ಕೆ ಬ್ಯೂಲಾ ಎಂದೂ ಹೆಸರಾಗುವುದು. ಏಕೆಂದರೆ ಯೆಹೋವ ದೇವರು ನಿನ್ನನ್ನು ಮೆಚ್ಚುವರು, ನಿನ್ನ ದೇಶಕ್ಕೆ ವಿವಾಹವಾಗುವುದು.