Isaiah 62:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೌವನಸ್ಥನು ಕನ್ನಿಕೆಯನ್ನು ಪ್ರೀತಿಸಿ ಮದುವೆಯಾಗುವನು; ತನ್ನ ಹೆಂಡತಿಯನ್ನಾಗಿ ಆಕೆಯನ್ನು ಸ್ವೀಕರಿಸುವನು. ಅದೇ ರೀತಿಯಲ್ಲಿ ದೇವರು ನಿನ್ನನ್ನು ವಿವಾಹವಾಗುತ್ತಾನೆ. ದೇಶವು ತುಂಬಿಹೋಗುವಷ್ಟು ಮಕ್ಕಳನ್ನು ಆತನು ಪಡೆದುಕೊಳ್ಳುತ್ತಾನೆ. ಒಬ್ಬನು ಹೊಸದಾಗಿ ಮದುವೆಯಾದ ತನ್ನ ಹೆಂಡತಿಯೊಡನೆ ಉಲ್ಲಾಸದಿಂದಿರುವಂತೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯುವಕನು ಯುವತಿಯನ್ನು ವರಿಸುವಂತೆ, ನಿನ್ನ ಮಕ್ಕಳು ನಿನ್ನನ್ನು ವರಿಸುವರು; ವರನು ವಧುವಿನಲ್ಲಿ ಆನಂದಿಸುವ ಹಾಗೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು.
Kannada BSI Bible 2016
ಯೌವನಸ್ಥನು ಕನ್ಯಾಸ್ತ್ರೀಯನ್ನು ಮದುವೆಮಾಡಿ ಕೊಳ್ಳುವ ಪ್ರಕಾರ ನಿನ್ನ ಕುಮಾರರು ನಿನ್ನನ್ನು ಮದುವೆ ಮಾಡಿಕೊಳ್ಳುವರು; ಮದಲಿಂಗನು ಮದಲಗಿತ್ತಿಯಲ್ಲಿ ಆನಂದಪಡುವ ಪ್ರಕಾರ ನಿನ್ನ ದೇವರು ನಿನ್ನಲ್ಲಿ ಆನಂದಪಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯುವಕನು ಯುವತಿಯನ್ನು ವರಿಸುವಂತೆ ನಿನ್ನ ಮಕ್ಕಳು ನಿನ್ನನ್ನು ವರಿಸುವರು; ವರನು ವಧುವಿನಲ್ಲಿ ಆನಂದಿಸುವ ಹಾಗೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು.
Kannada Bible (KNCL) BSI 2016
ಯುವಕನು ಕನ್ಯೆಯುವತಿಯನು ವರಿಸುವಂತೆ ವರಿಸುವನು ಸೃಷ್ಟಿಕರ್ತನು ನಿನ್ನನು. ವರನು ವಧುವಿನಲಿ ಆನಂದಿಸುವಂತೆ ನಿನ್ನಲಿ ಆನಂದಿಸುವನು ನಿನ್ನ ದೇವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯುವಕನು ಕನ್ಯೆ ಯುವತಿಯನ್ನು ವರಿಸುವಂತೆ, ನಿನ್ನ ಜನರು ದೇಶವನ್ನು ಸ್ವಾಧೀನಪಡಿಸಿಕೊಳ್ಳುವರು. ವರನು ವಧುವಿನ ಮೇಲೆ ಆನಂದ ಪಡುವ ಪ್ರಕಾರ, ನಿನ್ನ ದೇವರು ನಿನ್ನ ಮೇಲೆ ಆನಂದಿಸುವರು.