Isaiah 63:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೊಲದಲ್ಲಿ ನಡೆಯುತ್ತಿರುವಾಗ ಒಂದು ದನವೂ ಬೀಳಲಿಲ್ಲ. ಅದೇ ರೀತಿಯಲ್ಲಿ ಸಮುದ್ರದ ಮಧ್ಯದಲ್ಲಿ ನಡೆಯುವಾಗ ಅವರು ಬೀಳಲಿಲ್ಲ. ವಿಶ್ರಾಂತಿಯ ಸ್ಥಳಕ್ಕೆ ಯೆಹೋವನ ಆತ್ಮವು ಅವರನ್ನು ನಡೆಸಿತು. ದಾರಿಯುದ್ದಕ್ಕೂ ಜನರು ಸುರಕ್ಷಿತರಾಗಿದ್ದರು. ಯೆಹೋವನೇ, ಹೀಗೆ ನೀನು ನಿನ್ನ ಜನರನ್ನು ನಡೆಸಿದೆ. ಹೀಗೆ ನೀನು ನಿನ್ನ ಹೆಸರನ್ನು ಆಶ್ಚರ್ಯಕರವನ್ನಾಗಿ ಮಾಡಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಗ್ಗಿಗೆ ಇಳಿಯುವ ದನಗಳೋಪಾದಿಯಲ್ಲಿ ಯೆಹೋವನ ಆತ್ಮವು ಅವರನ್ನು ವಿಶ್ರಾಂತಿಯ ಸ್ಥಾನಕ್ಕೆ ಕರೆತಂದಿತು; ನಿನ್ನ ನಾಮವನ್ನು ಘನಪಡಿಸಿಕೊಳ್ಳುವುದಕ್ಕಾಗಿ ನಿನ್ನ ಜನರನ್ನು ಹೀಗೆ ನಡೆಸಿದಿ.
Kannada BSI Bible 2016
ಪಶುವು ತಗ್ಗಿಗೆ ಇಳಿ ಯುವ ಪ್ರಕಾರ, ಕರ್ತನ ಆತ್ಮನು ಅವರಿಗೆ ವಿಶ್ರಾಂತಿ ಕೊಟ್ಟನು; ಈ ಪ್ರಕಾರ ನೀನು ನಿನಗೆ ಮಹಿಮೆ ಯುಳ್ಳ ಹೆಸರನ್ನು ಉಂಟು ಮಾಡುವ ಹಾಗೆ, ನಿನ್ನ ಜನರನ್ನು ನಡಿಸಿದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಆತ್ಮವು ತಗ್ಗಿಗೆ ಇಳಿಯುವ ದನಗಳೋಪಾದಿಯಲ್ಲಿ ಅವರನ್ನು ವಿಶ್ರಮಸ್ಥಾನಕ್ಕೆ ಕರತಂದಿತು; ನಿನ್ನ ನಾಮವನ್ನು ಘನಪಡಿಸಿಕೊಳ್ಳುವದಕ್ಕಾಗಿ ನಿನ್ನ ಜನರನ್ನು ಹೀಗೆ ನಡಿಸಿದಿ.
Kannada Bible (KNCL) BSI 2016
ತಪ್ಪಲಿಗೆ ಇಳಿದ ದನಕರುಗಳಂತೆ ಆ ಜನರನ್ನು ಕರೆತಂದಿತು ಸ್ವಾಮಿಯ ಆತ್ಮ ಶಾಂತಿ ನಿಲಯಕೆ. ಹೀಗೆ, ಆ ಜನರಿಗೆ ಮಾರ್ಗದರ್ಶಕರಾಗಿ ತಮ್ಮ ನಾಮವನ್ನು ಘನಪಡಿಸಿಕೊಂಡರು ಸ್ವಾಮಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಶುವು ತಗ್ಗಿಗೆ ಇಳಿಯುವ ಪ್ರಕಾರ, ಯೆಹೋವ ದೇವರ ಆತ್ಮರು ಅವರಿಗೆ ವಿಶ್ರಾಂತಿಯನ್ನು ಕೊಟ್ಟರು. ಈ ಪ್ರಕಾರ ನೀವು ನಿಮಗೆ ಮಹಿಮೆಯುಳ್ಳ ಹೆಸರನ್ನು ಉಂಟುಮಾಡುವುದಕ್ಕಾಗಿ, ನಿಮ್ಮ ಜನರನ್ನು ನಡಿಸಿದಿರಿ.