Isaiah 63:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನೇ, ಈಗ ನಡೆಯುವ ಸಂಗತಿಗಳನ್ನು ಪರಲೋಕದಿಂದ ನೋಡು. ಪರಲೋಕದಲ್ಲಿರುವ ನಿನ್ನ ಪವಿತ್ರಸ್ಥಾನದಿಂದ ನಮ್ಮನ್ನು ದೃಷ್ಟಿಸು. ನಮ್ಮ ಮೇಲಿನ ಗಾಢವಾದ ಪ್ರೀತಿ ಎಲ್ಲಿದೆ? ನಿನ್ನ ಅಂತರಂಗದೊಳಗಿಂದ ಬಂದ ಕಾರ್ಯಗಳೆಲ್ಲಿ? ನಮ್ಮ ಮೇಲೆ ನಿನಗಿರುವ ಕರುಣೆ ಎಲ್ಲಿ? ನಿನ್ನ ದಯಾಪರವಾದ ಪ್ರೀತಿಯನ್ನು ನಮ್ಮಿಂದ ಯಾಕೆ ಅಡಗಿಸುವೆ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕಾಶದಿಂದ ನೋಡು, ಪರಿಶುದ್ಧವೂ, ಘನವೂ ಆದ ನಿನ್ನ ಉನ್ನತಸ್ಥಾನದಿಂದ ಲಕ್ಷಿಸು; ನಿನ್ನ ಉತ್ಸಾಹವೆಲ್ಲಿ, ನಿನ್ನ ಸಾಹಸ ಕಾರ್ಯಗಳೆಲ್ಲಿ? ನಿನ್ನ ಕರುಳ ಮರುಗಾಟವನ್ನೂ, ನಿನ್ನ ಕನಿಕರವನ್ನೂ ನಮ್ಮ ಕಡೆಗೆ ಬಿಗಿ ಹಿಡಿದಿದ್ದಿ.
Kannada BSI Bible 2016
ಆಕಾಶದಿಂದ, ನಿನ್ನ ಪರಿ ಶುದ್ಧ ಮಹಿಮೆಯ ನಿವಾಸದಿಂದ ದೃಷ್ಟಿಸಿನೋಡು; ನಿನ್ನ ಆಸಕ್ತಿಯೂ ನಿನ್ನ ಪರಾಕ್ರಮವೂ ನಿನ್ನ ಕರುಳುಗಳ ಘೋಷವೂ ನನ್ನ ವಿಷಯವಾದ ನಿನ್ನ ಕರುಣೆಗಳೂ ಎಲ್ಲಿ? ಬಿಗಿ ಹಿಡುಕೊಂಡಿದ್ದೀಯೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕಾಶದಿಂದ ನೋಡು, ಪರಿಶುದ್ಧವೂ ಘನವೂ ಆದ ನಿನ್ನ ಉನ್ನತಸ್ಥಾನದಿಂದ ಲಕ್ಷಿಸು; ನಿನ್ನ ಆಗ್ರಹವೆಲ್ಲಿ, ನಿನ್ನ ಸಾಹಸಕಾರ್ಯಗಳೆಲ್ಲಿ? ನಿನ್ನ ಕರುಳ ಮರುಗಾಟವನ್ನೂ ನಿನ್ನ ಕನಿಕರವನ್ನೂ ನಮ್ಮ ಕಡೆಗೆ ಬಿಗಿಹಿಡಿದಿದ್ದೀ.
Kannada Bible (KNCL) BSI 2016
ಸ್ವಾಮಿ ಸರ್ವೇಶ್ವರಾ, ಆಕಾಶದಿಂದ ನಮ್ಮನು ಈಕ್ಷಿಸಿನೋಡಿ; ಪರಿಶುದ್ಧವೂ ಪೂಜ್ಯವೂ ಆದ ನಿಮ್ಮ ನಿವಾಸದಿಂದ ವೀಕ್ಷಿಸಿನೋಡಿ. ನಿಮ್ಮ ಹುರುಪು ಉತ್ಸಾಹವೆಲ್ಲಿ? ನಿಮ್ಮ ಸಾಹಸಕಾರ್ಯಗಳು ಏನಾದುವು? ನಮ್ಮಿಂದ ಬಿಗಿಹಿಡಿದಿರುವಿರಾ ನಿಮ್ಮ ಕನಿಕರವನು? ನಿಮ್ಮ ಕರುಳ ಕರೆಯನು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕಾಶದಿಂದ ಕೆಳಗೆ ನೋಡಿರಿ, ನಿಮ್ಮ ಪವಿತ್ರವೂ ಮಹಿಮೆಯೂ ಆದ ನಿಮ್ಮ ಸಿಂಹಾಸನದಿಂದ ದೃಷ್ಟಿಸಿ ನೋಡಿರಿ. ನಿಮ್ಮ ಆಸಕ್ತಿಯೂ, ನಿಮ್ಮ ಪರಾಕ್ರಮವೂ, ನಿಮ್ಮ ಹೃದಯದ ಘೋಷವೂ, ನಮ್ಮ ವಿಷಯವಾದ ನಿಮ್ಮ ಕರುಣೆ ಕನಿಕರಗಳೂ ಎಲ್ಲಿ? ಬಿಗಿಹಿಡಿದುಕೊಂಡಿದ್ದೀರೋ?