Isaiah 63:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ನಮ್ಮ ತಂದೆಯಾಗಿರುವೆ. ಅಬ್ರಹಾಮನಿಗೆ ನಮ್ಮ ಪರಿಚಯವಿಲ್ಲ. ಇಸ್ರೇಲನು ನಮ್ಮನ್ನು ಗುರುತಿಸುವುದಿಲ್ಲ. ಯೆಹೋವನೇ, ನೀನೇ ನಮ್ಮ ತಂದೆ. ನೀನೇ ನಮ್ಮನ್ನು ಯಾವಾಗಲೂ ರಕ್ಷಿಸಿದಾತನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವನೇ, ನೀನೇ ನಮ್ಮ ಪಿತೃ; ನೀನು ಆದಿಯಿಂದಲೂ ‘ನಮ್ಮ ವಿಮೋಚಕನು’ ಅನ್ನಿಸಿಕೊಂಡಿದ್ದಿ.
Kannada BSI Bible 2016
ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ ನಿಸ್ಸಂದೇಹವಾಗಿ ನೀನೇ ನಮ್ಮ ತಂದೆಯಾಗಿದ್ದೀ; ಕರ್ತನಾದ ನೀನೇ ನಮ್ಮ ತಂದೆಯು, ನಮ್ಮ ವಿಮೋಚಕನು; ನಿನ್ನ ಹೆಸರು ಸದಾಕಾಲವೂ ಇದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವಾ, ನೀನೇ ನಮ್ಮ ಪಿತೃ; ಆದಿಯಿಂದಲೂ ನಮ್ಮ ವಿಮೋಚಕನು ಅನ್ನಿಸಿಕೊಂಡಿದ್ದೀ.
Kannada Bible (KNCL) BSI 2016
ನೀವೇ ನಮ್ಮ ತಂದೆ. ಅಬ್ರಹಾಮನು ನಮ್ಮನ್ನು ಅರಿಯದೆ ಇರಬಹುದು, ಇಸ್ರಯೇಲನು ನಮ್ಮನ್ನು ಗುರುತಿಸದೆ ಇರಬಹುದು, ಆದರೆ ಸರ್ವೇಶ್ವರಾ, ನೀವೇ ನಮ್ಮ ತಂದೆ, ನಮ್ಮ ಉದ್ಧಾರಕ; ಆದಿಯಿಂದ ಇರಲು ಅದುವೇ ನಿಮ್ಮ ನಾಮಾಂಕಿತ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ, ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ ಯೆಹೋವ ದೇವರಾದ ನೀವೇ ನಮ್ಮ ತಂದೆಯೂ, ನಮ್ಮ ವಿಮೋಚಕರೂ ಆಗಿದ್ದೀರಿ. ನಿಮ್ಮ ಹೆಸರು ಸದಾಕಾಲವೂ ಇದೆ