Isaiah 63:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ, ನೀನು ನಮ್ಮನ್ನು ನಿನ್ನಿಂದ ದೂರ ಮಾಡಿರುವೆ. ನಾವು ನಿನ್ನನ್ನು ಹಿಂಬಾಲಿಸಬೇಕೆಂದರೂ ಹಾಗೆ ಆಗದಂತೆ ಅದನ್ನೇಕೆ ಕಷ್ಟಕರವಾಗಿ ಮಾಡಿರುವೆ? ಯೆಹೋವನೇ, ನಮ್ಮ ಬಳಿಗೆ ಹಿಂದಿರುಗಿ ಬಾ. ನಾವು ನಿನ್ನ ಸೇವಕರಾಗಿದ್ದೇವೆ. ನಮ್ಮ ಬಳಿಗೆ ಬಂದು ಸಹಾಯಮಾಡು. ನಮ್ಮ ಕುಟುಂಬಗಳು ನಿನ್ನವೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ನಾವು ನಿನ್ನ ಮಾರ್ಗದಿಂದ ತಪ್ಪಿ ಅಲೆಯುವಂತೆ ಏಕೆ ಮಾಡುತ್ತೀ? ನಾವು ನಿನಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿನಪಡಿಸುವುದೇಕೆ? ನಿನ್ನ ಸೇವಕರ ನಿಮಿತ್ತ ನಿನ್ನ ಬಾಧ್ಯವಾದ ಕುಲಗಳಿಗಾಗಿ ತಿರುಗಿ ಪ್ರಸನ್ನನಾಗು.
Kannada BSI Bible 2016
ಓ ಕರ್ತನೇ, ಏಕೆ ನಮ್ಮನ್ನು ನಿನ್ನ ಮಾರ್ಗಗ ಳಿಂದ ತಪ್ಪಿಹೋಗುವಂತೆ ಮಾಡಿದ್ದೀ. ಏಕೆ ನಮ್ಮ ಹೃದಯವನ್ನು ನಿನಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀ. ನಿನ್ನ ಸೇವಕರಿಗೋಸ್ಕರವೂ ನಿನ್ನ ಬಾಧ್ಯತೆಯ ಗೋತ್ರಗಳಿಗೋಸ್ಕರವೂ ಹಿಂತಿರುಗು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ನಾವು ನಿನ್ನ ಮಾರ್ಗದಿಂದ ತಪ್ಪಿ ಅಲೆಯುವಂತೆ ಏಕೆ ಮಾಡುತ್ತೀ? ನಾವು ನಿನಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿನ ಪಡಿಸುವದೇಕೆ? ನಿನ್ನ ಸೇವಕರ ನಿವಿುತ್ತ ನಿನ್ನ ಬಾಧ್ಯವಾದ ಕುಲಗಳಿಗಾಗಿ ತಿರುಗಿ ಪ್ರಸನ್ನನಾಗು,
Kannada Bible (KNCL) BSI 2016
ಸ್ವಾಮೀ, ನಾವು ನಿಮ್ಮ ಮಾರ್ಗ ತಪ್ಪಿ ಅಲೆಯುವಂತೆ ಮಾಡುತ್ತೀರಿ, ಏಕೆ? ನಿಮಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿಣಪಡಿಸುವುದು ಏಕೆ? ನಿಮ್ಮ ಶರಣರ ನಿಮಿತ್ತ, ನಿಮಗೆ ಬಾಧ್ಯರಾದ ಕುಲಗಳ ನಿಮಿತ್ತ, ನಮಗೆ ಪ್ರಸನ್ನಚಿತ್ತರಾಗಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ಏಕೆ ನಮ್ಮನ್ನು ನಿಮ್ಮ ಮಾರ್ಗಗಳಿಂದ ತಪ್ಪಿಹೋಗುವಂತೆ ಅನುಮತಿಸಿದ್ದೀರಿ? ಏಕೆ ನಮ್ಮ ಹೃದಯವನ್ನು ನಿಮಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀರಿ? ನಿಮ್ಮ ಸೇವಕರಿಗೋಸ್ಕರವೂ, ನಿಮ್ಮ ಬಾಧ್ಯರಾಗಿರುವ ಗೋತ್ರಗಳ ನಿಮಿತ್ತ ನೀವು ಹಿಂದಿರುಗಿರಿ.