Isaiah 63:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಪವಿತ್ರ ಜನರು ತಮ್ಮ ದೇಶದಲ್ಲಿ ಸ್ವಲ್ಪಕಾಲಕ್ಕೆ ಮಾತ್ರ ವಾಸಿಸಿದರು. ಆಗ ನಮ್ಮ ಶತ್ರುಗಳು ಬಂದು ನಿನ್ನ ಪವಿತ್ರ ಆಲಯದಲ್ಲಿ ತುಳಿದಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಸ್ವಕೀಯಜನರು ಸ್ವಲ್ಪಕಾಲ ಮಾತ್ರ ನಿನ್ನ ಸ್ವತ್ತಾದ ಪವಿತ್ರಸ್ಥಳವನ್ನು ಅನುಭವಿಸುತ್ತಿದ್ದರು; ಈಗ ನಮ್ಮ ವೈರಿಗಳು ಅದನ್ನು ತುಳಿದುಬಿಟ್ಟಿದ್ದಾರೆ.
Kannada BSI Bible 2016
ಸ್ವಲ್ಪ ಕಾಲ ಮಾತ್ರ ನಿನ್ನ ಪರಿಶುದ್ಧ ಜನರು ಅದನ್ನು ಸ್ವಾಧೀನ ಮಾಡಿಕೊಂಡರು; ನಮ್ಮ ಶತ್ರು ಗಳು ನಿನ್ನ ಪರಿಶುದ್ಧ ಸ್ಥಳವನ್ನು ತುಳಿದುಬಿಟ್ಟಿದ್ದಾರೆ.ನಾವು ನಿನ್ನವರಾಗಿದ್ದೇವೆ; ಅವರ ಮೇಲೆ ನೀನು ದೊರೆತನ ಮಾಡಲಿಲ್ಲ; ಅವರು ನಿನ್ನ ಹೆಸರಿನಿಂದ ಕರೆಯಲ್ಪಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಸ್ವಕೀಯಜನರು ಸ್ವಲ್ಪಕಾಲ ಮಾತ್ರ [ನಿನ್ನ ಸ್ವಾಸ್ತ್ಯವನ್ನು] ಅನುಭವಿಸುತ್ತಿದ್ದರು; ಈಗ ನಮ್ಮ ವೈರಿಗಳು ನಿನ್ನ ಪವಿತ್ರಾಲಯವನ್ನು ತುಳಿದುಬಿಟ್ಟಿದ್ದಾರೆ.
Kannada Bible (KNCL) BSI 2016
ನಿಮ್ಮ ಸ್ವಕೀಯ ಜನರು ಸ್ವಲ್ಪಕಾಲ ಮಾತ್ರ ಅನುಭವಿಸಿದಾ ನಿಮ್ಮ ಪವಿತ್ರ ಗರ್ಭಗುಡಿಯನ್ನು ನಮ್ಮ ವೈರಿಗಳು ತುಳಿದು ಹಾಳುಮಾಡಿದರಲ್ಲಾ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸ್ವಲ್ಪಕಾಲ ಮಾತ್ರ ನಿಮ್ಮ ಪರಿಶುದ್ಧ ಜನರು ಅದನ್ನು ಸ್ವಾಧೀನಮಾಡಿಕೊಂಡರು. ನಮ್ಮ ಶತ್ರುಗಳು ನಿಮ್ಮ ಪವಿತ್ರಾಲಯವನ್ನು ತುಳಿದುಬಿಟ್ಟಿದ್ದಾರೆ.