Isaiah 63:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನ ಉತ್ತರ: “ದ್ರಾಕ್ಷಿತೊಟ್ಟಿಯಲ್ಲಿ ನಾನೊಬ್ಬನೇ ತುಳಿದೆನು. ಯಾರೂ ನನಗೆ ಸಹಾಯ ಮಾಡಲಿಲ್ಲ. ನಾನು ಕೋಪಗೊಂಡು ದ್ರಾಕ್ಷಿಹಣ್ಣಿನ ಮೇಲೆ ತುಳಿದೆನು. ಅದರ ರಸ ನನ್ನ ಬಟ್ಟೆಯ ಮೇಲೆ ಹಾರಿತು. ಆದ್ದರಿಂದ ನನ್ನ ಬಟ್ಟೆಗಳು ಮಲಿನವಾದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನೊಬ್ಬನೇ ದ್ರಾಕ್ಷಿಯನ್ನು ತೊಟ್ಟಿಯಲ್ಲಿ ತುಳಿದಿದ್ದೇನೆ, ಜನಾಂಗದವರಲ್ಲಿ ಯಾರೂ ನನ್ನೊಂದಿಗಿರಲಿಲ್ಲ. ನನ್ನ ಕೋಪದಿಂದ ಶತ್ರುಗಳನ್ನು ತುಳಿದೆನು, ರೋಷವೇರಿದವನಾಗಿ ಅವರನ್ನು ತುಳಿದುಹಾಕಿದೆನು; ಅವರ ಜೀವಸತ್ವ ನನ್ನ ವಸ್ತ್ರಗಳ ಮೇಲೆ ಸಿಡಿದಿದೆ, ನನ್ನ ಉಡುಪನ್ನೆಲ್ಲಾ ಮಲಿನ ಮಾಡಿಕೊಂಡೆನು.
Kannada BSI Bible 2016
ದ್ರಾಕ್ಷೇ ತೊಟ್ಟಿಯನ್ನು ನಾನೊಬ್ಬನೇ ತುಳಿದಿದ್ದೇನೆ, ಜನಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ; ನನ್ನ ಕೋಪದಲ್ಲಿ ಅವರನ್ನು ತುಳಿದಿದ್ದೇನೆ, ನನ ಉರಿಯಲ್ಲಿ ಅವರನ್ನು ಜಜ್ಜಿಬಿಟ್ಟಿದ್ದೇನೆ. ಆದದರಿಂದ ಅವರ ರಕ್ತವು ನನ್ನ ಬಟ್ಟೆಗಳ ಮೇಲೆ ಚಿಮುಕಿಸ ಲ್ಪಟ್ಟಿದೆ, ನನ್ನ ವಸ್ತ್ರಗಳೆಲ್ಲಾ ಮೈಲಿಗೆಯಾದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನೊಬ್ಬನಾಗಿಯೇ ದ್ರಾಕ್ಷೆಯನ್ನು ತೊಟ್ಟಿಯಲ್ಲಿ ತುಳಿದಿದ್ದೇನೆ, ಜನಾಂಗದವರಲ್ಲಿ ಯಾರೂ ನನ್ನೊಂದಿಗಿರಲಿಲ್ಲ. ನನ್ನ ಕೋಪದಿಂದ ಶತ್ರುಗಳನ್ನು ತುಳಿದೆನು, ರೋಷವೇರಿದವನಾಗಿ ಅವರನ್ನು ಕಾಲಿನಿಂದ ಹೊಸಗಿದೆನು; ಅವರ ಸಾರವು ನನ್ನ ವಸ್ತ್ರಗಳ ಮೇಲೆ ಸಿಡಿದಿದೆ, ನನ್ನ ಉಡುಪನ್ನೆಲ್ಲಾ ಮಾಸಿಕೊಂಡೆನು.
Kannada Bible (KNCL) BSI 2016
“ದ್ರಾಕ್ಷಿಹಣ್ಣನು ತುಳಿವಂತೆ ತುಳಿದಿದ್ದೇನೆ ರಾಷ್ಟ್ರಗಳನು ಒಬ್ಬಂಟಿಗನಾಗೇ ಯಾರು ಇರಲಿಲ್ಲ ನನಗೆ ಸಹಾಯಕ್ಕೆ. ಅವರನ್ನು ತುಳಿದೆ ಕೋಪದಿಂದ ರೋಷಾವೇಶದಿಂದ ಹೊಸಕಿದೆ ಕಾಲಿನಿಂದ. ಅವರ ರಕ್ತ ನನ್ನ ಬಟ್ಟೆಗಳ ಮೇಲೆ ಸಿಡಿದಿದೆ. ನನ್ನ ಉಡುಪಿಗೆಲ್ಲಾ ಆ ಬಿಸಿರಕ್ತ ಮೆತ್ತಿಕೊಂಡಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ದ್ರಾಕ್ಷಿಯನ್ನು ತೊಟ್ಟಿಯಲ್ಲಿ ನಾನೊಬ್ಬನೇ ತುಳಿದಿದ್ದೇನೆ. ಜನಾಂಗಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ. ನನ್ನ ಕೋಪದಲ್ಲಿ ಅವರನ್ನು ತುಳಿದಿದ್ದೇನೆ, ನನ್ನ ಉರಿಯಲ್ಲಿ ಅವರನ್ನು ಜಜ್ಜಿದ್ದೇನೆ. ಆದ್ದರಿಂದ ಅವರ ರಕ್ತವು ನನ್ನ ಬಟ್ಟೆಗಳ ಮೇಲೆ ಸಿಡಿದು, ನನ್ನ ವಸ್ತ್ರಕ್ಕೆ ಮೆತ್ತಿಕೊಂಡಿದೆ;