Isaiah 63:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಸುತ್ತಲೂ ನೋಡಿದಾಗ ನನಗೆ ಸಹಾಯ ಮಾಡುವವರು ಯಾರೂ ಇರಲಿಲ್ಲ. ನನ್ನನ್ನು ಯಾರೂ ಬೆಂಬಲಿಸದೆ ಇರುವದನ್ನು ನೋಡಿ ನನಗೆ ಆಶ್ಚರ್ಯವಾಯಿತು. ಆಗ ನನ್ನ ಜನರನ್ನು ರಕ್ಷಿಸಲು ನನ್ನ ಬಲವನ್ನೇ ಪ್ರಯೋಗಿಸಿದೆನು. ನನ್ನ ಕೋಪವೇ ನನ್ನನ್ನು ಬಲಪಡಿಸಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ, ಯಾವ ಬೆಂಬಲವೂ ಇಲ್ಲದ್ದನ್ನು ಕಂಡು ಸ್ತಬ್ಧನಾದೆನು; ಆಗ ನನ್ನ ಸ್ವಹಸ್ತವೇ ನನಗೆ ರಕ್ಷಣಾಸಾಧನವಾಯಿತು, ನನ್ನ ರೌದ್ರವೇ ನನಗೆ ಆಧಾರವಾಯಿತು.
Kannada BSI Bible 2016
ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ; ಉದ್ಧಾರ ಮಾಡುವವನು ಇಲ್ಲದ್ದರಿಂದ ಆಶ್ಚರ್ಯಪಟ್ಟೆನು; ಆದದರಿಂದ ನನ್ನ ಸ್ವಂತ ಬಾಹುವು ನನಗೆ ರಕ್ಷಣೆಯನ್ನುಂಟುಮಾಡಿತು; ನನ್ನ ರೋಷವು ನನ್ನನ್ನು ಮೆಲಕ್ಕೆತ್ತಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ, ಯಾವ ಬೆಂಬಲವೂ ಇಲ್ಲದ್ದನ್ನು ಕಂಡು ಸ್ತಬ್ಧನಾದೆನು; ಆಗ ನನ್ನ ಸ್ವಹಸ್ತವೇ ನನಗೆ ರಕ್ಷಣ ಸಾಧನವಾಯಿತು, ನನ್ನ ರೌದ್ರವೇ ನನಗೆ ಆಧಾರವಾಯಿತು.
Kannada Bible (KNCL) BSI 2016
ಸುತ್ತಲು ನೋಡಿದೆ, ಯಾರು ಇರಲಿಲ್ಲ ಸಹಾಯಮಾಡಲು ನನಗೆ ಒತ್ತಾಸೆಗೆ ಒಬ್ಬನೂ ಇಲ್ಲದ್ದನ್ನು ಕಂಡು ಸ್ತಬ್ಧನಾದೆ. ಆಗ ನನ್ನ ಭುಜಬಲವೇ ಜಯಕ್ಕೆ ಅಡಿಪಾಯವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ, ಉದ್ಧಾರ ಮಾಡುವವನು ಇಲ್ಲದ್ದರಿಂದ ಆಶ್ಚರ್ಯಪಟ್ಟೆನು. ಆಗ ನನ್ನ ಸ್ವಂತ ಬಾಹುವು ನನಗೆ ರಕ್ಷಣೆಯನ್ನು ಉಂಟುಮಾಡಿತು. ನನ್ನ ಕೋಪವೇ ನನಗೆ ಆಧಾರವಾಯಿತು.