Isaiah 63:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಕರುಣಾಶೀಲನೆಂಬುದನ್ನು ನೆನಪು ಮಾಡಿಕೊಳ್ಳುವೆನು. ಆತನನ್ನು ಸ್ತುತಿಸಲು ನೆನಪುಮಾಡಿಕೊಳ್ಳುವೆನು. ಇಸ್ರೇಲ್ ಕುಟುಂಬಕ್ಕೆ ಯೆಹೋವನು ಎಷ್ಟೋ ಮೇಲನ್ನು ಮಾಡಿದ್ದಾನೆ. ನಮ್ಮ ಮೇಲೆ ಯೆಹೋವನು ತನ್ನ ದಯೆಯನ್ನು ಸುರಿಸಿದ್ದಾನೆ. ನಮಗೆ ಕರುಣೆಯನ್ನು ತೋರಿಸಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ನಮಗೆ ಅನುಗ್ರಹಿಸಿದ್ದನ್ನೆಲ್ಲಾ ಸ್ಮರಿಸಿ ಆತನ ಕೃಪಾಕಾರ್ಯಗಳನ್ನು ಮತ್ತು ಸ್ತುತ್ಯಕೃತ್ಯಗಳನ್ನು, ಆತನು ಕನಿಕರದಿಂದಲೂ, ಕೃಪಾತಿಶಯದಿಂದಲೂ ಇಸ್ರಾಯೇಲ್ ವಂಶದವರಿಗೆ ದಯಪಾಲಿಸಿರುವ ಮಹೋಪಕಾರವನ್ನೂ ಪ್ರಸಿದ್ಧಿಪಡಿಸುವೆನು.
Kannada BSI Bible 2016
ಕರ್ತನು ನಮಗೆ ಮಾಡಿದ್ದೆಲ್ಲಾದರ ಪ್ರಕಾರ, ಕರ್ತನ ಪ್ರೀತಿ ಕೃಪೆಗಳನ್ನೂ ಕರ್ತನ ಸ್ತೋತ್ರಗಳನ್ನೂ ಜ್ಞಾಪಕಪಡಿಸುವೆನು; ಆತನು ತನ್ನ ಅಂತಃಕರುಣೆಯ ಪ್ರಕಾರವೂ ತನ್ನ ಕೃಪೆಯ ಮಹಾ ಒಳ್ಳೇತನದ ಪ್ರಕಾರವೂ ಇಸ್ರಾಯೇಲಿನ ಮನೆಯವರಿಗೆ ದೊಡ್ಡ ಉಪಕಾರ ಮಾಡಿದನಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ನಮಗೆ ಅನುಗ್ರಹಿಸಿದ್ದನ್ನೆಲ್ಲಾ ಸ್ಮರಿಸಿ ಆತನ ಕೃಪಾಕಾರ್ಯಗಳನ್ನೂ ಸ್ತುತ್ಯಕೃತ್ಯಗಳನ್ನೂ ಆತನು ಕನಿಕರದಿಂದಲೂ ಕೃಪಾತಿಶಯದಿಂದಲೂ ಇಸ್ರಾಯೇಲ್ ವಂಶದವರಿಗೆ ದಯಪಾಲಿಸಿರುವ ಮಹೋಪಕಾರವನ್ನೂ ಪ್ರಸಿದ್ಧಿಪಡಿಸುವೆನು.
Kannada Bible (KNCL) BSI 2016
ಸ್ಮರಿಸುವೆನು ಸರ್ವೇಶ್ವರನ ಸ್ತುತ್ಯಕಾರ್ಯಗಳನು ಆತನ ಅಚಲಪ್ರೀತಿಯನು, ಕೃಪಾತಿಶಯಗಳನು. ಹೊಗಳುವೆನು ಆತನೆಮಗೆ ಅನುಗ್ರಹಿಸಿದ ಎಲ್ಲ ವರದಾನಗಳಿಗಾಗಿ ಇಸ್ರಯೇಲ್ ವಂಶಜರಿಗೆ ಮಾಡಿದ ಮಹೋಪಕಾರಗಳಿಗಾಗಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ನಮಗೆ ಮಾಡಿದ್ದೆಲ್ಲದರ ಪ್ರಕಾರ, ಯೆಹೋವ ದೇವರ ಪ್ರೀತಿ ಕೃಪೆಗಳನ್ನೂ, ಯೆಹೋವ ದೇವರ ಕಾರ್ಯಗಳನ್ನು ಸ್ತೋತ್ರಗಳನ್ನೂ ಜ್ಞಾಪಕಪಡಿಸುವೆನು. ಆತನು ತನ್ನ ಅಂತಃಕರುಣೆಯ ಪ್ರಕಾರವೂ, ತನ್ನ ಕೃಪೆಯ ಮಹಾ ಒಳ್ಳೆಯತನದ ಪ್ರಕಾರವೂ, ಇಸ್ರಾಯೇಲಿನ ಮನೆಯವರಿಗೆ ದೊಡ್ಡ ಉಪಕಾರ ಮಾಡಿದನಲ್ಲಾ.