Isaiah 63:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೇಳಿದ್ದೇನೆಂದರೆ: “ಇವರೇ ನನ್ನ ಜನರು. ಇವರೆಲ್ಲಾ ನನ್ನ ಸ್ವಂತ ಮಕ್ಕಳು.” ಆದ್ದರಿಂದ ಯೆಹೋವನು ಅವರನ್ನು ರಕ್ಷಿಸಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಿಜವಾಗಿ ಇವರು ನನ್ನ ಜನರು, ನನ್ನ ಮಕ್ಕಳು, ಮೋಸ ಮಾಡಲಾರರು” ಎಂದು ಆತನು ಅಂದುಕೊಂಡು ಅವರಿಗೆ ರಕ್ಷಕನಾದನು.
Kannada BSI Bible 2016
ಆತನು--ನಿಶ್ಚಯವಾಗಿ ಅವರು ನನ್ನ ಜನರೇ, ಸುಳ್ಳಾಡದ ಮಕ್ಕಳೇ ಎಂದು ಹೇಳಿದನು; ಆದದರಿಂದ ಅವರಿಗೆ ರಕ್ಷಕನಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಜವಾಗಿ ಇವರು ನನ್ನ ಜನರು, ನನ್ನ ಮಕ್ಕಳು, ಮೋಸ ಮಾಡಲಾರರು ಎಂದು ಆತನು ಅಂದುಕೊಂಡು ಅವರಿಗೆ ರಕ್ಷಕನಾದನು.
Kannada Bible (KNCL) BSI 2016
“ನಿಜವಾಗಿ ಇವರು ನನ್ನ ಜನ, ನನ್ನ ಮಕ್ಕಳು, ನನಗೆ ಮೋಸಮಾಡರು,” ಎಂದುಕೊಂಡರು ಸರ್ವೇಶ್ವರ ಸ್ವಾಮಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆತನು ನಿಶ್ಚಯವಾಗಿ, “ಅವರು ನನ್ನ ಜನರೇ, ಸುಳ್ಳಾಡದ ಮಕ್ಕಳೇ!” ಎಂದು ಹೇಳಿದನು. ಆದ್ದರಿಂದ ಅವರಿಗೆ ರಕ್ಷಕನಾಗಿದ್ದನು.