Isaiah 64:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಮ್ಮ ಪವಿತ್ರ ಆಲಯವು ಬೆಂಕಿಯಿಂದ ಸುಡಲ್ಪಟ್ಟಿದೆ. ಆ ದೇವಾಲಯವು ನಮಗೆ ಅತ್ಯಂತ ಅಮೂಲ್ಯವಾದದ್ದಾಗಿದೆ. ನಮ್ಮ ಪೂರ್ವಿಕರು ನಿನ್ನನ್ನು ಅಲ್ಲಿ ಆರಾಧಿಸಿದರು. ನಾವು ಹೊಂದಿದಂಥ ಎಲ್ಲಾ ಒಳ್ಳೆಯವುಗಳು ಈಗ ನಾಶವಾದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ಪೂರ್ವಿಕರು ನಿನ್ನನ್ನು ಕೀರ್ತಿಸುತ್ತಿದ್ದ ಸುಂದರ ಪವಿತ್ರಾಲಯವನ್ನು ಬೆಂಕಿಯು ಸುಟ್ಟುಬಿಟ್ಟಿದೆ, ನಮ್ಮ ಅಮೂಲ್ಯ ವಸ್ತುಗಳೆಲ್ಲಾ ನಾಶವಾಗಿವೆ.
Kannada BSI Bible 2016
ನಮ್ಮ ತಂದೆಗಳು ನಿನ್ನನ್ನು ಕೊಂಡಾಡಿದ ನಮ್ಮ ಪರಿಶುದ್ಧ ಮತ್ತು ಸುಂದರ ವಾದ ಮನೆ ಬೆಂಕಿಯಿಂದ ಸುಟ್ಟುಹೋಯಿತು; ನಮ್ಮ ಸೊಗಸಾದವುಗಳೆಲ್ಲಾ ನಾಶವಾದವು.ಇವು ಹೀಗಿರಲಾಗಿ ಕರ್ತನೇ, ನಿನ್ನನ್ನು ಬಿಗಿಹಿಡುಕೊಳ್ಳು ತ್ತೀಯೋ? ಮೌನವಾಗಿದ್ದು ನಮ್ಮನ್ನು ಅತ್ಯಧಿಕವಾಗಿ ಕುಗ್ಗಿಸುವಿಯೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ಪಿತೃಗಳು ನಿನ್ನನ್ನು ಕೀರ್ತಿಸುತ್ತಿದ್ದ ನಮ್ಮ ಸುಂದರ ಪವಿತ್ರಾಲಯವನ್ನು ಬೆಂಕಿಯು ಸುಟ್ಟುಬಿಟ್ಟಿದೆ, ನಮ್ಮ ಅಮೂಲ್ಯವಸ್ತುಗಳೆಲ್ಲಾ ನಾಶವಾಗಿವೆ.
Kannada Bible (KNCL) BSI 2016
ನಮ್ಮ ಪಿತೃಗಳು ನಿಮ್ಮನ್ನು ಕೀರ್ತಿಸುತ್ತಿದ್ದ ಆ ಸ್ಥಳವೇ, ಆ ನಮ್ಮ ಚೆಲುವ ಪವಿತ್ರಾಲಯವೇ, ಬೆಂಕಿಯ ಪಾಲಾಗಿದೆ. ನಮ್ಮ ಅಮೂಲ್ಯ ವಸ್ತುಗಳೆಲ್ಲ ನಾಶವಾಗಿವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮ ತಂದೆಗಳು ನಿನ್ನನ್ನು ಕೊಂಡಾಡಿದ ನಮ್ಮ ಪರಿಶುದ್ಧ ಶೃಂಗಾರವಾದ ದೇವಾಲಯ ಬೆಂಕಿಯಿಂದ ಸುಟ್ಟುಹೋಯಿತು. ನಮ್ಮ ಅಮೂಲ್ಯ ವಸ್ತುಗಳೆಲ್ಲ ನಾಶವಾದವು.