Isaiah 64:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಣಎಲೆಯು ಸುಟ್ಟುಹೋಗುವಂತೆ ಪರ್ವತಗಳು ಸುಟ್ಟು ಭಸ್ಮವಾಗುವವು. ಬೆಂಕಿಯಲ್ಲಿ ನೀರು ಕುದಿಯುವಂತೆ ಪರ್ವತಗಳು ಕುದಿಯುವವು. ಆಗ ನಿನ್ನ ಶತ್ರುಗಳು ನಿನ್ನ ವಿಷಯವಾಗಿ ತಿಳಿಯುವರು. ಆಗ ಜನಾಂಗದವರೆಲ್ಲಾ ನಿನ್ನನ್ನು ನೋಡಿ ಭಯದಿಂದ ನಡುಗುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಣಗಿಡಕ್ಕೆ ಹತ್ತುವ ಕಿಚ್ಚಿನ ಪ್ರಕಾರ, ನೀರನ್ನು ಕುದಿಸುವ ಬೆಂಕಿಯೋಪಾದಿಯಲ್ಲಿಯೂ ನೀನು ಪ್ರತ್ಯಕ್ಷನಾಗಿ, ನಿನ್ನ ನಾಮಮಹತ್ತನ್ನು ನಿನ್ನ ಶತ್ರುಗಳಿಗೆ ತಿಳಿಯಪಡಿಸಿ, ಜನಾಂಗಗಳನ್ನು ನಿನ್ನ ದರ್ಶನದಿಂದ ನಡುಗಿಸಬಾರದೇ!
Kannada BSI Bible 2016
ಬೆಂಕಿ ಕಟ್ಟಿಗೆಯನ್ನು ಹೊತ್ತಿಸುವಂತೆಯೂ ಬೆಂಕಿ ನೀರನ್ನು ಉಕ್ಕಿಸುವಂತೆಯೂ ನಿನ್ನ ಹೆಸರು ನಿನ್ನ ವೈರಿಗಳಿಗೆ ತಿಳಿಯುವಂತೆಯೂ ಮಾಡು!
Kannada BSI JV (ಕನ್ನಡ ಸತ್ಯವೇದವು J.V. (BSI))
ಒಣಗಿಡಕ್ಕೆ ಹತ್ತುವ ಕಿಚ್ಚಿನ ಪ್ರಕಾರವೂ ನೀರನ್ನು ಕುದಿಸುವ ಉರಿಯೋಪಾದಿಯಲ್ಲಿಯೂ [ನೀನು ಪ್ರತ್ಯಕ್ಷನಾಗಿ]
Kannada Bible (KNCL) BSI 2016
ಒಣಗಿಡಕ್ಕೆ ಹಚ್ಚುವ ಕಿಚ್ಚಿನಂತೆ, ನೀರನ್ನು ಕುದಿಸುವ ಬೆಂಕಿಯಂತೆ ನೀವು ಪ್ರತ್ಯಕ್ಷರಾಗಲಾರಿರಾ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆಂಕಿ ಕಟ್ಟಿಗೆಯನ್ನು ಹೊತ್ತಿಸುವಂತೆಯೂ, ಬೆಂಕಿ ನೀರನ್ನು ಉಕ್ಕಿಸುವಂತೆಯೂ, ನೀನು ಇಳಿದುಬಂದು ನಿನ್ನ ಹೆಸರನ್ನು ನಿನ್ನ ವೈರಿಗಳಿಗೆ ತಿಳಿಯುವಂತೆ ಮಾಡು!