Isaiah 64:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ಹೆಸರನ್ನು ಯಾರೂ ಕರೆಯುವದಿಲ್ಲ. ನಿನ್ನನ್ನು ಹಿಂಬಾಲಿಸಲು ಯಾರಿಗೂ ಇಷ್ಟವಿಲ್ಲ; ಯಾಕೆಂದರೆ ನೀನು ನಮಗೆ ವಿಮುಖನಾಗಿರುವೆ ಮತ್ತು ನಮ್ಮನ್ನು ನಮ್ಮ ಪಾಪಗಳ ದೋಷಕ್ಕೆ ಒಪ್ಪಿಸಿಕೊಟ್ಟಿರುವಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ, ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ; ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಮಾಡಿದ್ದಿಯಲ್ಲಾ.
Kannada BSI Bible 2016
ನಿನ್ನ ಹೆಸರನ್ನು ಕರೆಯುವವನೂ ನಿನ್ನನ್ನು ಹಿಡು ಕೊಳ್ಳುವದಕ್ಕೆ ತನ್ನನ್ನು ಪ್ರೇರಿಸಿಕೊಳ್ಳುವವನು ಒಬ್ಬನೂ ಇಲ್ಲ; ನಿನ್ನ ಮುಖವನ್ನು ನಮಗೆ ಮರೆಮಾಡಿದ್ದೀ; ನಮ್ಮ ಅಕ್ರಮಗಳಿಗಾಗಿ ನಮ್ಮನ್ನು ದಹಿಸಿಬಿಟ್ಟಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ; ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಮಾಡಿದ್ದೀಯಲ್ಲಾ.
Kannada Bible (KNCL) BSI 2016
ನಿಮ್ಮ ನಾಮಸ್ಮರಣೆ ಮಾಡುವವನು ಯಾರೂ ಇಲ್ಲ. ನಿಮ್ಮ ಆಶ್ರಯ ಕೋರುವ ಆಸಕ್ತನು ಎಲ್ಲಿಯೂ ಇಲ್ಲ. ಏಕೆಂದರೆ ನೀವು ನಮಗೆ ವಿಮುಖರಾಗಿದ್ದೀರಿ. ನಮ್ಮ ಪಾಪಗಳ ವಶಕ್ಕೆ ನಮ್ಮನ್ನು ಬಿಟ್ಟುಬಿಟ್ಟಿದ್ದೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಹೆಸರನ್ನು ಕರೆಯುವವನೂ, ನಿನ್ನನ್ನು ಹಿಡಿದುಕೊಳ್ಳುವುದಕ್ಕೆ ಎಚ್ಚರಗೊಳ್ಳುವವನು ಒಬ್ಬನೂ ಇಲ್ಲ. ಏಕೆಂದರೆ ನಿನ್ನ ಮುಖವನ್ನು ನಮಗೆ ಮರೆಮಾಡಿದ್ದೀ. ನಮ್ಮ ಪಾಪಗಳಿಗಾಗಿ ನಮ್ಮನ್ನು ಬಿಟ್ಟುಬಿಟ್ಟಿದ್ದೀರಿ.