Isaiah 64:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನೇ, ನಮ್ಮ ಮೇಲೆ ಸಿಟ್ಟಿನಿಂದಲೇ ಇರಬೇಡ. ನಮ್ಮ ಪಾಪಗಳನ್ನು ನಿನ್ನ ನೆನಪಿನಲ್ಲಿಟ್ಟುಕೊಂಡೇ ಇರಬೇಡ. ದಯಮಾಡಿ ನಮ್ಮ ಕಡೆಗೆ ನೋಡು. ನಾವು ನಿನ್ನ ಜನರೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನೇ, ಅತಿರೋಷಗೊಳ್ಳದಿರು, ನಮ್ಮ ಅಧರ್ಮವನ್ನು ಕಡೆಯವರೆಗೂ ಜ್ಞಾಪಕದಲ್ಲಿಡಬೇಡ; ಎಲೈ, ಕರ್ತನೇ, ಕಟಾಕ್ಷಿಸು, ನಾವೆಲ್ಲರೂ ನಿನ್ನ ಜನರಾಗಿದ್ದೇವೆ.
Kannada BSI Bible 2016
ಓ ಕರ್ತನೇ, ಅತ್ಯಧಿಕ ವಾಗಿ ರೌದ್ರನಾಗಬೇಡ; ಎಂದೆಂದಿಗೂ ಅಕ್ರಮ ವನ್ನು ಜ್ಞಾಪಕಮಾಡಬೇಡ; ಇಗೋ, ನೋಡು, ನಾವು ಬೇಡುತ್ತೇವೆ ದೃಷ್ಟಿಯಿಡು; ನಾವೆಲ್ಲರೂ ನಿನ್ನ ಜನರೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ಅತಿರೋಷಗೊಳ್ಳದಿರು, ನಮ್ಮ ಅಧರ್ಮವನ್ನು ಕಡೆಯವರೆಗೂ ಜ್ಞಾಪಕದಲ್ಲಿಡಬೇಡ; ಎಲೈ, ಸ್ವಾಮೀ, ಕಟಾಕ್ಷಿಸು, ನಾವೆಲ್ಲರೂ ನಿನ್ನ ಜನರಾಗಿದ್ದೇವೆ.
Kannada Bible (KNCL) BSI 2016
ಸ್ವಾಮಿ, ನಮ್ಮ ಮೇಲೆ ಅತಿಕೋಪಗೊಳ್ಳದಿರಿ. ಸದಾ ನಮ್ಮ ಅಕ್ರಮಗಳನ್ನು ನೆನೆಸದಿರಿ, ಇಗೋ ನೋಡಿ, ಬೇಡುತ್ತಿದ್ದೇವೆ, ನಾವೆಲ್ಲರೂ ನಿಮ್ಮ ಜನರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರೇ, ಅತ್ಯಧಿಕವಾಗಿ ಬೇಸರಗೊಳ್ಳಬೇಡ. ಎಂದೆಂದಿಗೂ ಪಾಪವನ್ನು ಜ್ಞಾಪಕ ಮಾಡಬೇಡ. ನೋಡಿರಿ, ನಾವು ಬೇಡುತ್ತೇವೆ, ದೃಷ್ಟಿ ಇಡಿರಿ. ನಾವೆಲ್ಲರೂ ನಿನ್ನ ಜನರೇ.