Isaiah 65:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಶಾರೋನಿನ ಕಣಿವೆಯು ಕುರಿಗಳು ಮೇಯುವ ಮೈದಾನವಾಗುವದು. ಆಕೋರಿನ ಕಣಿವೆಯು ದನಗಳು ಮಲಗುವ ಸ್ಥಳವಾಗುವದು. ಇವೆಲ್ಲವೂ ನನ್ನ ಜನರಿಗಾಗುವದು. ಇವರು ನನಗಾಗಿ ಹುಡುಕುತ್ತಿರುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನನ್ನ ಭಕ್ತಜನರ ಹಿತಕ್ಕಾಗಿ ಶಾರೋನು ಹಿಂಡುಗಳಿಗೆ ಹುಲ್ಲುಗಾವಲಾಗಿಯೂ, ಆಕೋರಿನ ತಗ್ಗು ದನದ ಹಕ್ಕೆಯಾಗಿಯೂ ಇರುವವು.
Kannada BSI Bible 2016
ನನ್ನನ್ನು ಹುಡುಕುವ ನನ್ನ ಜನರಿ ಗೋಸ್ಕರ ಶಾರೋನು ಮಂದೆಗಳ ಹಟ್ಟಿಯಾಗಿಯೂ ಆಕೋರಿನ ತಗ್ಗು, ದನಗಳು ಮಲಗುವ ಸ್ಥಳವಾ ಗಿಯೂ ಇರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನನ್ನ ಭಕ್ತಜನರ ಹಿತಕ್ಕಾಗಿ ಶಾರೋನು ಹಿಂಡುಗಳಿಗೆ ಹುಲ್ಲುಗಾವಲಾಗಿಯೂ ಆಕೋರಿನ ತಗ್ಗು ದನದ ಹಕ್ಕೆಯಾಗಿಯೂ ಇರುವವು.
Kannada Bible (KNCL) BSI 2016
ನನ್ನ ಜನರ ಹಿತಕ್ಕಾಗಿ ಶಾರೋನ್‍ಬಯಲು ಮಂದೆಗಳಿಗೆ ಹುಲ್ಲುಗಾವಲಾಗುವುದು; ಆಕೋರಿನ ಕಣಿವೆ ದನಕರುಗಳಿಗೆ ಕೊಟ್ಟಿಗೆಯಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನನ್ನು ಹುಡುಕುವ ನನ್ನ ಜನರಿಗೋಸ್ಕರ ಶಾರೋನು ಮಂದೆಗಳ ಹಟ್ಟಿಯಾಗಿಯೂ, ಆಕೋರಿನ ತಗ್ಗು, ದನಗಳು ಮಲಗುವ ಸ್ಥಳವಾಗಿಯೂ ಇರುವುದು, ಎಂದು ಯೆಹೋವ ದೇವರು ಹೇಳುತ್ತಾರೆ.