Isaiah 65:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆದರೆ ನೀವು ಯೆಹೋವನನ್ನು ತೊರೆದಿರುವದರಿಂದ ಶಿಕ್ಷಿಸಲ್ಪಡುವಿರಿ. ನೀವು ನನ್ನ ಪವಿತ್ರ ಪರ್ವತವನ್ನು ಮರೆತುಬಿಟ್ಟಿದ್ದೀರಿ. ನೀವು ‘ಅದೃಷ್ಟ’ ಎಂಬ ಸುಳ್ಳುದೇವರನ್ನು ಪೂಜಿಸಲಾರಂಭಿಸಿದ್ದೀರಿ. ನೀವು ‘ಗತಿ’ ಎಂಬ ಸುಳ್ಳುದೇವರನ್ನು ಅವಲಂಭಿಸಿಕೊಂಡಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಯೆಹೋವನಾದ ನನ್ನನ್ನು ತೊರೆದು, ನನ್ನ ಪವಿತ್ರ ಪರ್ವತವನ್ನು ಮರೆತು, ಶುಭದಾಯಕ ದೇವತೆಗೆ ಔತಣವನ್ನು ಏರ್ಪಡಿಸಿ, ಗತಿದಾಯಕ ದೇವತೆಗೆ ಮದ್ಯವನ್ನು ಬೆರಸಿದ ನಿಮಗೆ ಕತ್ತಿಯನ್ನೇ ಗತಿಯಾಗ ಮಾಡುವೆನು.
Kannada BSI Bible 2016
ಆದರೆ ಕರ್ತನನ್ನು ಬಿಟ್ಟವರೇ, ನೀವು ನನ್ನ ಪರಿ ಶುದ್ಧ ಪರ್ವತವನ್ನು ಮರೆತವರೇ, ಸೈನ್ಯಕ್ಕೆ ಮೇಜನ್ನು ಸಿದ್ಧಮಾಡಿ ಅವರಿಗೆ ಪಾನದರ್ಪಣೆ ಮಾಡುವವರೇ ಆಗಿದ್ದೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಯೆಹೋವನಾದ ನನ್ನನ್ನು ತೊರೆದು ನನ್ನ ಪವಿತ್ರಪರ್ವತವನ್ನು ಮರೆತು ಶುಭದಾಯಕದೇವತೆಗೆ ಔತಣವನ್ನು ಅಣಿಮಾಡಿ ಗತಿದಾಯಕದೇವತೆಗೆ ಮದ್ಯವನ್ನು ತುಂಬಾ ಬೆರಸಿದ ನಿಮಗೆ ಕತ್ತಿಯನ್ನೇ ಗತಿಯಾಗಮಾಡುವೆನು.
Kannada Bible (KNCL) BSI 2016
“ಆದರೆ ನನ್ನನ್ನು ತೊರೆದು ನನ್ನ ಪವಿತ್ರ ಪರ್ವತವನ್ನು ಮರೆತು, ‘ಗಾದ್’ ಎಂಬ ಅದೃಷ್ಟ ದೇವತೆಗೆ ಔತಣವನ್ನು ಅಣಿಮಾಡುವ, ‘ಮೆನೀ’ ಎಂಬ ಗತಿ ದೇವತೆಗೆ ಬೆರೆತ ಮದ್ಯವನ್ನು ಭರ್ತಿಮಾಡುವ, ನಿಮಗೆ ಕತ್ತಿಯನ್ನೇ ಗತಿಯನ್ನಾಗಿ ಮಾಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೆ ಯೆಹೋವನಾದ ನನ್ನನ್ನು ತೊರೆದು, ನನ್ನ ಪವಿತ್ರ ಪರ್ವತವನ್ನು ಮರೆತು, ಶುಭದಾಯಕ ದೇವತೆಗೆ ಔತಣವನ್ನು ಅಣಿಮಾಡಿ, ಗಾದ್ ಎಂಬ ಅದೃಷ್ಟ ದೇವತೆಗೆ ಮದ್ಯವನ್ನು ತುಂಬಾ ಬೆರೆಸಿದ ನಿಮಗೆ