Isaiah 65:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ಹೆಸರುಗಳು ನನ್ನ ಸೇವಕರಿಗೆ ಶಾಪವಾಗಿ ಉಪಯೋಗಿಸಲ್ಪಡುತ್ತವೆ. ನನ್ನ ಒಡೆಯನಾದ ಯೆಹೋವನು ನಿಮ್ಮನ್ನು ಸಾಯಿಸುವನು. ಆತನು ತನ್ನ ಸೇವಕರನ್ನು ಹೊಸ ಹೆಸರಿನಿಂದ ಕರೆಯುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ನಿಮ್ಮನ್ನು ಕೊಂದುಹಾಕುವನು, ನಿಮ್ಮ ಹೆಸರು ನನ್ನ ಆಪ್ತಜನರು ಶಪಿಸುವ ಶಾಪದ ಮಾತಾಗಿಯೇ ಉಳಿಯುವುದು; ನಾನು ನನ್ನ ಸೇವಕರಿಗೆ ಹೊಸ ಹೆಸರನ್ನು ಕೊಡುವೆನು.
Kannada BSI Bible 2016
ನಾನು ಆದುಕೊಂಡವರಿಗೆ ನಿಮ್ಮ ಹೆಸರನ್ನು ಶಾಪವಾಗಿ ಉಳಿ ಸುವಿರಿ; ಕರ್ತನಾದ ಯೆಹೋವನು ನಿಮ್ಮನ್ನು ಕೊಂದು ಹಾಕಿ, ತನ್ನ ಸೇವಕರಿಗೆ ಬೇರೆ ಹೆಸರನ್ನು ಇಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ನಿಮ್ಮನ್ನು ಕೊಂದುಹಾಕುವನು, ನಿಮ್ಮ ಹೆಸರು ನನ್ನ ಆಪ್ತಜನರು ಶಪಿಸುವ ಶಾಪದ ಮಾತಾಗಿಯೇ ಉಳಿಯುವದು; ನಾನು ನನ್ನ ಸೇವಕರಿಗೆ ಹೊಸ ಹೆಸರನ್ನು ಕೊಡುವೆನು.
Kannada Bible (KNCL) BSI 2016
ಆಯ್ಕೆಯಾದವರಿಗೆ ನಿಮ್ಮ ಹೆಸರು ಶಾಪದ ಹೆಸರಾಗಿಯೇ ಉಳಿಯುವುದು. ಏಕೆಂದರೆ, ಸ್ವಾಮಿ ಸರ್ವೇಶ್ವರ ಆದ ನಾನು ನಿಮ್ಮನ್ನು ಕೊಲೆಗೀಡುಮಾಡುವೆನು. ನನ್ನ ಭಕ್ತಾದಿಗಳಿಗಾದರೋ ಹೊಸ ಹೆಸರನ್ನು ಕೊಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಹೆಸರನ್ನು ನಾನು ಆಯ್ದುಕೊಂಡವರಿಗೆ ಶಾಪವಾಗಿ ಉಳಿಸುವಿರಿ. ಹೇಗೆಂದರೆ, ಸಾರ್ವಭೌಮ ಯೆಹೋವ ದೇವರು ಅಪನಂಬಿಗಸ್ತರಾದ ನಿಮ್ಮನ್ನು ಕೊಂದುಹಾಕಿ, ತಮ್ಮ ಸೇವಕರಿಗಾದರೋ ಬೇರೆ ಹೆಸರನ್ನು ನೀಡುವರು.