Isaiah 65:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಗ ಜನರು ಭೂಮಿಯಿಂದ ಆಶೀರ್ವಾದ ಕೇಳುತ್ತಾರೆ. ಆದರೆ ಮುಂದಿನ ದಿನಗಳಲ್ಲಿ ಅವರು ನಂಬಿಗಸ್ತನಾದ ದೇವರಿಂದ ಆಶೀರ್ವಾದ ಕೇಳುವರು. ಈಗ ಜನರು ವಾಗ್ದಾನ ಮಾಡುವಾಗ ಭೂಮಿಯ ಬಲದಲ್ಲಿ ಭರವಸವಿಡುವರು. ಆದರೆ ಮುಂದಿನ ದಿನಗಳಲ್ಲಿ ನಂಬಿಗಸ್ತನಾದ ದೇವರ ಮೇಲೆ ಭರವಸವಿಡುವರು. ಯಾಕೆಂದರೆ ಗತಿಸಿದ ಸಂಕಟಗಳೆಲ್ಲವೂ ಮರೆತುಹೋಗುತ್ತವೆ. ಇವುಗಳು ನನ್ನ ಕಣ್ಣುಗಳಿಗೆ ಮರೆಯಾಗಿರುತ್ತವೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಪೂರ್ವದ ಕಷ್ಟಗಳು ಇನ್ನು ನನ್ನ ಕಣ್ಣಿಗೆ ಬೀಳದೆ ಮರೆತು ಹೋಗಿರುವುದರಿಂದ ಲೋಕದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವ ಪ್ರತಿಯೊಬ್ಬನೂ ಸತ್ಯಸಂಧನಾದ ದೇವರ ಹೆಸರಿನಿಂದ ಆಶೀರ್ವದಿಸಿಕೊಳ್ಳುವನು; ಲೋಕದಲ್ಲಿ ಆಣೆಯಿಡುವ ಪ್ರತಿಯೊಬ್ಬನೂ ಸತ್ಯವಂತನಾದ ದೇವರ ಮೇಲೆ ಆಣೆಯಿಡುವನು.
Kannada BSI Bible 2016
ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳು ವವನು ಸತ್ಯ ದೇವರಲ್ಲಿ ಆಶೀರ್ವದಿಸಿಕೊಳ್ಳುವನು. ದೇಶದಲ್ಲಿ ಆಣೆ ಇಟ್ಟುಕೊಳ್ಳುವವನು; ಸತ್ಯದೇವರ ಮೇಲೆ ಆಣೆ ಇಟ್ಟುಕೊಳ್ಳುವನು; ಮುಂಚಿನ ಕಷ್ಟಗಳು ಮರೆತುಹೋಗಿವೆ ಮತ್ತು ಅವು ನನ್ನ ಕಣ್ಣುಗಳಿಗೆ ಮರೆಯಾಗಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಪೂರ್ವದ ಕಷ್ಟಗಳು ಇನ್ನು ನನ್ನ ಕಣ್ಣಿಗೆ ಬೀಳದೆ ಮರೆತುಹೋಗಿರುವವಾದದರಿಂದ ಲೋಕದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವ ಪ್ರತಿಯೊಬ್ಬನೂ ಸತ್ಯಸಂಧನಾದ ದೇವರ ಹೆಸರಿನಿಂದ ಆಶೀರ್ವದಿಸಿಕೊಳ್ಳುವನು; ಲೋಕದಲ್ಲಿ ಆಣೆಯಿಡುವ ಪ್ರತಿಯೊಬ್ಬನೂ ಸತ್ಯಸಂಧನಾದ ದೇವರ ಮೇಲೆ ಆಣೆಯಿಡುವನು.
Kannada Bible (KNCL) BSI 2016
ಹಳೆಯ ಕಷ್ಟದುಃಖಗಳು ಇನ್ನು ಕಣ್ಮರೆಯಾಗಿಹೋಗುವುವು: ನಾಡಿನಲ್ಲಿ ಆಶೀರ್ವಾದ ಪಡೆಯುವವನು ಸತ್ಯಸ್ವರೂಪನಾದ ದೇವರ ಹೆಸರಿನಲ್ಲಿ ಆಶೀರ್ವಾದ ಪಡೆಯುವನು. ಶಪಥ ಮಾಡುವವನು ಸತ್ಯಸ್ವರೂಪನಾದ ದೇವರ ಹೆಸರಿನಲ್ಲಿ ಶಪಥಮಾಡುವನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸುವವನು, ಸತ್ಯ ದೇವರಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವನು; ದೇಶದಲ್ಲಿ ಆಣೆ ಇಟ್ಟುಕೊಳ್ಳುವವನು, ಸತ್ಯ ದೇವರಲ್ಲಿ ಆಣೆ ಇಟ್ಟುಕೊಳ್ಳುವನು. ಏಕೆಂದರೆ ಮುಂಚಿನ ಕಷ್ಟಗಳು ಮರೆತು ಹೋಗಿವೆ, ಮತ್ತು ಅವು ನನ್ನ ಕಣ್ಣಿಗೆ ಮರೆಯಾಗಿವೆ.