Isaiah 65:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಜನರು ಸಂತೋಷದಲ್ಲಿರುವರು. ಅವರು ನಿತ್ಯಕಾಲಕ್ಕೂ ಹರ್ಷಿಸುವರು. ನಾನು ಜೆರುಸಲೇಮನ್ನು ಸಂತಸದಿಂದ ತುಂಬಿಸುವೆನು. ಅವರನ್ನು ಸಂತೋಷದ ಜನರನ್ನಾಗಿ ಮಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಮಾಡುವ ಸೃಷ್ಟಿಕಾರ್ಯದಲ್ಲಿಯೇ ಹರ್ಷಗೊಂಡು ಸದಾ ಉಲ್ಲಾಸಿಸಿರಿ; ಆಹಾ, ನಾನು ಯೆರೂಸಲೇಮನ್ನು ಉಲ್ಲಾಸದ ನಿವಾಸವನ್ನಾಗಿಯೂ, ಅದರ ಜನರನ್ನು ಹರ್ಷಭರಿತರನ್ನಾಗಿಯೂ ಮಾಡುವೆನು.
Kannada BSI Bible 2016
ಆದರೆ ನಾನು ಸೃಷ್ಟಿಸಿದವುಗಳಲ್ಲಿ ನೀವು ಸಂತೋಷಿಸಿ ಎಂದೆಂದಿಗೂ ಉಲ್ಲಾಸಪಡಿರಿ; ಯಾಕಂ ದರೆ ಇಗೋ, ನಾನು ಯೆರೂಸಲೇಮಿನಲ್ಲಿ ಉಲ್ಲಾಸ ವನ್ನೂ ಅವಳ ಜನರಲ್ಲಿ ಸಂತೋಷವನ್ನೂ ಸೃಷ್ಟಿಸು ತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಮಾಡುವ ಸೃಷ್ಟಿಕಾರ್ಯದಲ್ಲಿಯೇ ಹರ್ಷಗೊಂಡು ಸದಾ ಉಲ್ಲಾಸಿಸಿರಿ; ಆಹಾ, ನಾನು ಯೆರೂಸಲೇಮನ್ನು ಉಲ್ಲಾಸದ ನಿವಾಸವನ್ನಾಗಿಯೂ ಅದರ ಜನರನ್ನು ಹರ್ಷಭರಿತರನ್ನಾಗಿಯೂ ಮಾಡುವೆನು.
Kannada Bible (KNCL) BSI 2016
ನಾನು ಮಾಡುವ ಸೃಷ್ಟಿಕಾರ್ಯದಲ್ಲೇ ಸಂತೋಷಿಸಿ, ಎಂದೆಂದಿಗೂ ಆನಂದಿಸಿರಿ: ಹೌದು, ನಾನು ಜೆರುಸಲೇಮನ್ನು ಉಲ್ಲಾಸದ ನಿವಾಸವನ್ನಾಗಿಸುವೆನು; ಅದರ ಜನರನ್ನು ಹರ್ಷಭರಿತರನ್ನಾಗಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಾನು ಸೃಷ್ಟಿಸುವುದರ ವಿಷಯದಲ್ಲಿ ಸಂತೋಷಿಸಿ, ಎಂದೆಂದಿಗೂ ಉಲ್ಲಾಸಪಡಿರಿ. ಏಕೆಂದರೆ ಇಗೋ, ನಾನು ಯೆರೂಸಲೇಮಿನಲ್ಲಿ ಉಲ್ಲಾಸವನ್ನೂ, ನನ್ನ ಜನರಲ್ಲಿ ಸಂತೋಷವನ್ನೂ ಸೃಷ್ಟಿಸುತ್ತೇನೆ.