Isaiah 65:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನನಗೆ ವಿರುದ್ಧವಾಗಿ ಎದ್ದವರನ್ನು ಸ್ವೀಕರಿಸಲು ನಾನು ದಿನವೆಲ್ಲಾ ಸಿದ್ಧನಾಗಿ ನಿಂತೆನು. ಅವರು ನನ್ನ ಬಳಿಗೆ ಬರುತ್ತಾರೆಂದು ಕಾಯುತ್ತಾ ನಿಂತುಕೊಂಡೆನು. ಆದರೆ ಅವರು ಕೆಟ್ಟಜೀವಿತದಲ್ಲಿಯೇ ಮುಂದುವರಿದರು. ಅವರು ತಮಗೆ ಇಷ್ಟಬಂದ ಹಾಗೆ ನಡೆದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನನ್ನು ತೊರೆದು, ಮನಸ್ಸು ಬಂದ ಹಾಗೆ ದುರ್ಮಾರ್ಗದಲ್ಲಿ ನಡೆಯುವ ಜನರನ್ನು ನಾನು ದಿನವೆಲ್ಲಾ ಕೈಚಾಚಿ ಕರೆದೆನು.
Kannada BSI Bible 2016
ಒಳ್ಳೇದಲ್ಲದ ಮಾರ್ಗದಲ್ಲಿ ತಮ್ಮ ಆಲೋಚನೆಗಳ ಪ್ರಕಾರ ನಡೆದುಕೊಂಡು ತಿರುಗಿ ಬೀಳುವ ಜನರಿಗೆ ಹಗಲೆಲ್ಲಾ ನನ್ನ ಕೈಗಳನ್ನು ಚಾಚಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನನ್ನು ತೊರೆದು ಮನಸ್ಸುಬಂದ ಹಾಗೆ ದುರ್ಮಾರ್ಗದಲ್ಲಿ ನಡೆಯುವ ಜನರನ್ನು ನಾನು ದಿನವೆಲ್ಲಾ ಕೈ ಚಾಚಿ ಕರೆದೆನು.
Kannada Bible (KNCL) BSI 2016
ನನ್ನನ್ನು ತೊರೆದು ತಮಗೆ ಇಷ್ಟಬಂದ ಹಾದಿಯನ್ನು ಹಿಡಿದು ದುಷ್ಟಮಾರ್ಗದಲ್ಲೆ ನಡೆದ ಜನತೆಯನ್ನು ಕೈಚಾಚಿ ಕರೆದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಳ್ಳೆಯದಲ್ಲದ ಮಾರ್ಗದಲ್ಲಿ ತಮ್ಮ ಆಲೋಚನೆಗಳ ಪ್ರಕಾರ ನಡೆದುಕೊಂಡು ತಿರುಗಿಬೀಳುವ ಜನರಿಗೆ ದಿನವೆಲ್ಲಾ ನಾನು ಕೈಚಾಚಿ ಕರೆದೆನು.