Isaiah 65:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇನ್ನು ಮುಂದೆ ಯಾರಾದರೂ ಮನೆಯನ್ನು ಕಟ್ಟಿದರೆ, ಬೇರೆಯವರು ಅದನ್ನು ವಶಮಾಡಿಕೊಂಡು ಅದರಲ್ಲಿ ವಾಸಿಸುವದಿಲ್ಲ. ಇನ್ನು ಮುಂದೆ ಯಾರಾದರೂ ದ್ರಾಕ್ಷಿತೋಟವನ್ನು ಮಾಡಿದರೆ ಅದರ ಫಲವನ್ನು ಇತರರು ತಿನ್ನುವದಿಲ್ಲ. ಮರಗಳು ಎಷ್ಟು ಕಾಲ ಬೆಳೆಯುತ್ತವೋ ಅಷ್ಟುಕಾಲ ನನ್ನ ಜನರು ಜೀವಿಸುವರು. ನಾನು ಆರಿಸಿಕೊಂಡ ಜನರು ತಾವು ಮಾಡಿದ ಕಾರ್ಯಗಳಲ್ಲಿ ಆನಂದಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಬ್ಬನು ಕಟ್ಟಿದ ಮನೆಯಲ್ಲಿ ಬೇರೊಬ್ಬನು ವಾಸಿಸನು; ಒಬ್ಬನು ಮಾಡಿದ ತೋಟದ ಫಲವು ಇನ್ನೊಬ್ಬನಿಗೆ ವಶವಾಗದು; ನನ್ನ ಜನರ ಆಯುಸ್ಸು ವೃಕ್ಷದ ಆಯುಸ್ಸಿನಂತಿರುವುದು; ನನ್ನ ಆಪ್ತರು ತಮ್ಮ ಕೈಕೆಲಸದ ಆದಾಯವನ್ನು ಸಂಪೂರ್ಣವಾಗಿ ಅನುಭವಿಸುವರು.
Kannada BSI Bible 2016
ಅವರು ಕಟ್ಟಿದ್ದ ರಲ್ಲಿ ಇನ್ನೊಬ್ಬರು ವಾಸಮಾಡುವದಿಲ್ಲ. ಅವರು ನೆಟ್ಟ ದ್ದನ್ನು ಇನ್ನೊಬ್ಬರು ತಿನ್ನುವದಿಲ್ಲ; ಮರದ ದಿನಗಳ ಹಾಗೆ ನನ್ನ ಜನರ ದಿನಗಳು ಇರುವವು; ನಾನು ಆದುಕೊಂಡವರು ತಮ್ಮ ಕೈಕೆಲಸವನ್ನು ಅನು ಭವಿಸುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಬ್ಬನು ಕಟ್ಟಿದ ಮನೆಯಲ್ಲಿ ಬೇರೊಬ್ಬನು ವಾಸಿಸನು; ಒಬ್ಬನು ಮಾಡಿದ ತೋಟದ ಫಲವು ಇನ್ನೊಬ್ಬನಿಗೆ ವಶವಾಗದು; ನನ್ನ ಜನರ ಆಯುಸ್ಸು ವೃಕ್ಷದ ಆಯುಸ್ಸಿನಂತಿರುವದು; ನನ್ನ ಆಪ್ತರು ತಮ್ಮ ಕೈಕೆಲಸದ ಆದಾಯವನ್ನು ಪೂರಾ ಅನುಭವಿಸುವರು.
Kannada Bible (KNCL) BSI 2016
ತಾವು ಕಟ್ಟಿದ ಮನೆಗಳಲ್ಲಿ ಬೇರೆಯವರು ವಾಸಮಾಡುವುದಾಗಲಿ, ತಾವು ನೆಟ್ಟ ತೋಟಗಳ ಫಲವನ್ನು ಬೇರೆಯವರು ಅನುಭವಿಸುವುದಾಗಲಿ ಇನ್ನು ಸಂಭವಿಸದು. ಏಕೆಂದರೆ, ನನ್ನ ಜನರು ಮರಗಳಂತೆ ಬಹುಕಾಲ ಬಾಳುವರು. ನನ್ನಿಂದ ಆಯ್ಕೆಯಾದವರು ತಮ್ಮ ದುಡಿಮೆಯ ಫಲವನ್ನು ದೀರ್ಘಕಾಲ ಅನುಭವಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಕಟ್ಟಿದ ಮನೆಗಳಲ್ಲಿ ಬೇರೆಯವರು ವಾಸಮಾಡುವುದಿಲ್ಲ. ಅವರು ನೆಟ್ಟ ತೋಟದ ಫಲವನ್ನು ಇನ್ನೊಬ್ಬರು ತಿನ್ನುವುದಿಲ್ಲ. ಏಕೆಂದರೆ, ಮರಗಳ ಹಾಗೆ ನನ್ನ ಜನರು ಬಹುಕಾಲ ಬಾಳುವರು. ನಾನು ಆಯ್ದುಕೊಂಡವರು ತಮ್ಮ ಕೈಕೆಲಸಗಳನ್ನು ಅನುಭವಿಸುವರು.