Isaiah 65:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇನ್ನು ಮುಂದೆ ಜನರು ಬಿಟ್ಟೀಕೆಲಸ ಮಾಡುವದಿಲ್ಲ. ಇನ್ನು ಮುಂದೆ ಮಕ್ಕಳನ್ನು ಹೆರುವಾಗ ಕೇಡಾಗುತ್ತದೆಯೆಂಬ ಭಯವಿರುವುದಿಲ್ಲ. ನನ್ನ ಎಲ್ಲಾ ಜನರು ಮತ್ತು ಅವರ ಮಕ್ಕಳು ಯೆಹೋವನಿಂದ ಆಶೀರ್ವದಿಸಲ್ಪಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ವ್ಯರ್ಥವಾಗಿ ದುಡಿಯರು, ಅವರಿಗೆ ಹುಟ್ಟುವ ಮಕ್ಕಳು ಘೋರವ್ಯಾಧಿಗೆ ಗುರಿಯಾಗರು. ಅವರು ಯೆಹೋವನ ಆಶೀರ್ವಾದವನ್ನು ಹೊಂದಿದವರ ಸಂತಾನವಷ್ಟೆ; ಅವರ ಸಂತತಿಯವರು ಅವರೊಂದಿಗೆ ಬಹುದಿನವಿರುವರು.
Kannada BSI Bible 2016
ಅವರು ವ್ಯರ್ಥವಾಗಿ ದುಡಿಯರು ಕಷ್ಟವನ್ನು ಎದುರುಗೊಳ್ಳುವದಿಲ್ಲ; ಯಾಕಂದರೆ ಅವರು ಕರ್ತನು ಆಶೀರ್ವದಿಸಿದವರ ಸಂತಾನವಾಗಿದ್ದಾರೆ. ಅವರ ಸಂಗಡ ಅವರ ಸಂತತಿಯು ಸಹ ಆಶೀರ್ವದಿಸ ಲ್ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ವ್ಯರ್ಥವಾಗಿ ದುಡಿಯರು, ಅವರಿಗೆ ಹುಟ್ಟುವ ಮಕ್ಕಳು ಘೋರ ವ್ಯಾಧಿಗೆ ಗುರಿಯಾಗರು. ಅವರು ಯೆಹೋವನ ಆಶೀರ್ವಾದವನ್ನು ಹೊಂದಿದವರ ಸಂತಾನವಷ್ಟೆ; ಅವರ ಸಂತತಿಯವರು ಅವರೊಂದಿಗೆ ಬಹುದಿನವಿರುವರು.
Kannada Bible (KNCL) BSI 2016
ಅವರು ವ್ಯರ್ಥವಾಗಿ ದುಡಿಯರು, ಅನಾಹುತಕ್ಕಾಗಿ ಮಕ್ಕಳನ್ನು ಹಡೆಯರು. ಸದಾಕಾಲ ಅವರೂ ಅವರ ಸಂತತಿಯವರೂ ಸರ್ವೇಶ್ವರನಿಂದ ಅನುಗ್ರಹಗೊಂಡ ಗೋತ್ರವಾಗುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ವ್ಯರ್ಥವಾಗಿ ದುಡಿಯರು. ಕಷ್ಟವನ್ನು ಎದುರುಗೊಳ್ಳುವುದಿಲ್ಲ. ಏಕೆಂದರೆ ಅವರು ಯೆಹೋವ ದೇವರ ಆಶೀರ್ವಾದ ಹೊಂದಿದವರ ಸಂತಾನವಾಗಿದ್ದಾರೆ. ಅವರ ಸಂಗಡ ಅವರ ಸಂತತಿಯು ಸಹ ಆಶೀರ್ವಾದ ಹೊಂದುವುದು.