Isaiah 65:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತೋಳಗಳೂ ಕುರಿಮರಿಗಳೂ ಒಟ್ಟಾಗಿ ಮೇಯುವವು. ಸಿಂಹಗಳು ದನಕುರಿಗಳಂತೆ ಹುಲ್ಲನ್ನು ಮೇಯುತ್ತವೆ. ವಿಷದ ಹಾವುಗಳು ಕೇವಲ ಮಣ್ಣನ್ನೇ ತಿನ್ನುತ್ತವೆ. ನನ್ನ ಪವಿತ್ರಪರ್ವತದಲ್ಲಿ ಅವು ಯಾರಿಗೂ ಕೇಡುಮಾಡುವುದಿಲ್ಲ; ಯಾರಿಗೂ ಭಯ ಹುಟ್ಟಿಸುವುದಿಲ್ಲ.” ಇವು ಯೆಹೋವನ ನುಡಿಗಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತೋಳವು ಕುರಿಯ ಸಂಗಡ ಮೇಯುವುದು, ಸಿಂಹವು ಎತ್ತಿನಂತೆ ಹುಲ್ಲು ತಿನ್ನುವುದು, ಹಾವಿಗೆ ಧೂಳೇ ಆಹಾರವಾಗುವುದು. ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ” ಎಂದು ಯೆಹೋವನು ಅನ್ನುತ್ತಾನೆ.
Kannada BSI Bible 2016
ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ತೋಳವು ಕುರಿಯ ಸಂಗಡ ಮೇಯುವದು, ಸಿಂಹವು ಎತ್ತಿನಂತೆ ಹುಲ್ಲು ತಿನ್ನುವದು. ಹಾವಿಗೆ ದೂಳೇ ಆಹಾರವಾಗುವದು. ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡುಮಾಡುವದಿಲ್ಲ, ಯಾರೂ ಹಾಳುಮಾಡುವದಿಲ್ಲ ಎಂದು ಯೆಹೋವನು ಅನ್ನುತ್ತಾನೆ.
Kannada Bible (KNCL) BSI 2016
ತೋಳವೂ ಕುರಿಮರಿಯೂ ಒಂದಾಗಿ ಮೇಯುವುವು; ಸಿಂಹವು ಗೋವಿನಂತೆ ಹುಲ್ಲು ತಿನ್ನುವುದು; ಹಾವಿಗೆ ಮಣ್ಣೇ ಆಹಾರವಾಗುವುದು. ನನ್ನ ಪವಿತ್ರಪರ್ವತದೊಳೆಲ್ಲೂ ಅವು ಯಾವ ಕೇಡು ಮಾಡವು, ಹಾಳುಮಾಡವು.” ಇದು ಸರ್ವೇಶ್ವರ ಸ್ವಾಮಿಯ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತೋಳವೂ ಕುರಿಮರಿಯೂ ಒಂದಾಗಿ ಮೇಯುವುವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವುದು; ಹಾವಿಗೆ ಮಣ್ಣೇ ಆಹಾರವಾಗುವುದು; ಅವು ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾವ ಕೇಡೂ ಮಾಡುವುದಿಲ್ಲ, ನಾಶವೂ ಮಾಡುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.