Isaiah 65:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಅವರು ಇತರರಿಗೆ, ‘ನನ್ನ ಬಳಿಗೆ ಬರಬೇಡ. ನೀನು ನಿನ್ನನ್ನು ಶುದ್ಧಮಾಡುವ ತನಕ ನನ್ನನ್ನು ಮುಟ್ಟದಿರು’ ಎಂದು ಹೇಳುವರು. ಅವರು ನನ್ನ ಕಣ್ಣಿನಲ್ಲಿ ಹೊಗೆಯಂತಿದ್ದಾರೆ; ಅವರ ಬೆಂಕಿಯು ಸದಾ ಉರಿಯುತ್ತಿರುವದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು, ‘ಹತ್ತಿರ ಬರಬೇಡ, ನಾನು ಮಡಿವಂತನು, ನೀನು ಸೇರತಕ್ಕವನಲ್ಲ’ ಎನ್ನುತ್ತಾ, ಅಂತು ಪ್ರತಿನಿತ್ಯವೂ ಮುಖದೆದುರಿಗೆ ನನ್ನನ್ನು ಕೆಣಕುತ್ತಾ, ನನ್ನ ಮೂಗಿಗೆ ದಿನವೆಲ್ಲಾ ಉರಿಯುವ ಬೆಂಕಿಯ ಹೊಗೆಯಾಗಿದ್ದಾರೆ.
Kannada BSI Bible 2016
ನಿನ್ನ ಷ್ಟಕ್ಕೆ ನೀನೇ ನಿಂತುಕೋ, ನನ್ನ ಬಳಿಗೆ ಬರಬೇಡ, ಯಾಕಂದರೆ ನಿನಗಿಂತ ನಾನು ಪರಿಶುದ್ಧನಾಗಿದ್ದೇ ನೆಂದು ಹೇಳುವವರು; ಇವರು ನನ್ನ ಮೂಗಿನಲ್ಲಿ ಹೊಗೆಯಾಗಿಯೂ ಹಗಲೆಲ್ಲಾ ಉರಿಯುವ ಬೆಂಕಿ ಯಾಗಿಯೂ ಇದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹತ್ತಿರ ಬರಬೇಡ, ನಾನು ಮಡಿವಂತನು, ನೀನು ಸೇರತಕ್ಕವನಲ್ಲ ಎನ್ನುತ್ತಾ ಅಂತು ಪ್ರತಿನಿತ್ಯವೂ ಮುಖದೆದುರಿಗೆ ನನ್ನನ್ನು ಕೆಣಕುತ್ತಾ ನನ್ನ ಮೂಗಿಗೆ ದಿನವೆಲ್ಲಾ ಉರಿಯುವ ಬೆಂಕಿಯ ಹೊಗೆಯಾಗಿದ್ದಾರೆ.
Kannada Bible (KNCL) BSI 2016
ಬೇರೆಯವರಿಗೆ, ‘ಅಲ್ಲೇ ನಿಲ್ಲು, ಹತ್ತಿರ ಬರಬೇಡ; ನಿನಗಿಂತ ನಾನು ಮಡಿವಂತ’ ಎನ್ನುತ್ತಾರೆ. ಹೀಗೆ ಇವರು ನನಗೆ ಉಸಿರುಕಟ್ಟುವ ಹೊಗೆಯಾಗಿದ್ದಾರೆ; ದಿನವೆಲ್ಲ ಉರಿಯುವ ಬೆಂಕಿಯಾಗಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ನಿನ್ನಷ್ಟಕ್ಕೆ ನೀನೇ ನಿಂತುಕೋ, ನನ್ನ ಬಳಿಗೆ ಬರಬೇಡ. ಏಕೆಂದರೆ ನಿನಗಿಂತ ಪರಿಶುದ್ಧನಾಗಿದ್ದೇನೆ,’ ಎಂದು ಹೇಳುವರು. ಇವರು ನನ್ನ ಮೂಗಿನಲ್ಲಿ ಹೊಗೆಯಾಗಿಯೂ, ದಿನವೆಲ್ಲಾ ಉರಿಯುವ ಬೆಂಕಿಯಾಗಿಯೂ ಇದ್ದಾರೆ.