Isaiah 65:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇಗೋ! ನೀವು ಪಾವತಿ ಮಾಡಬೇಕಾದ ರಸೀದಿ ಇಲ್ಲಿದೆ. ನೀವು ಅಪರಾಧಿಗಳೆಂದು ಈ ರಸೀದಿ ತೋರಿಸುತ್ತದೆ. ಈ ಚೀಟಿಯಲ್ಲಿ ಬರೆದ ಮೊತ್ತವನ್ನು ಕೊಡದೆ ಸುಮ್ಮನಿರಲಾರೆ. ನಿಮ್ಮನ್ನು ಶಿಕ್ಷಿಸುವದರ ಮೂಲಕ ಈ ಮೊತ್ತವನ್ನು ಕೊಟ್ಟು ಬಿಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ಇದೆಲ್ಲಾ ಶಾಸನವಾಗಿ ನನ್ನ ಕಣ್ಣೆದುರಿಗಿದೆ, ನಾನು ಮುಯ್ಯಿ ತೀರಿಸುವ ತನಕ ಸುಮ್ಮನಿರಲಾರೆನು; ಅದರ ಪ್ರತಿಫಲವನ್ನು ಇವರ ಮಡಿಲಿಗೆ ಹಾಕುವೆನು;
Kannada BSI Bible 2016
ಇಗೋ, ನನ್ನ ಮುಂದೆ ಅದು ಬರೆಯಲ್ಪಟ್ಟಿದೆ; ನಾನು ಸುಮ್ಮನಿರದೆ ಪ್ರತಿಫಲ ಕೊಡುತ್ತೇನೆ; ಅವರ ಉಡಿಯಲ್ಲಿ ಪ್ರತಿಫಲ ಕೊಡು ತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ಇದೆಲ್ಲಾ ಶಾಸನವಾಗಿ ನನ್ನ ಕಣ್ಣೆದುರಿಗಿದೆ, ನಾನು ಮುಯ್ಯಿತೀರಿಸುವ ತನಕ ಸುಮ್ಮನಿರಲಾರೆನು;
Kannada Bible (KNCL) BSI 2016
“ಇಗೋ, ಇವೆಲ್ಲ ನನ್ನ ಕಣ್ಣೆದುರಿಗೆ ಲಿಖಿತವಾಗಿವೆ; ನಾನು ಮುಯ್ಯಿ ತೀರಿಸಿಯೇ ತೀರಿಸುವೆನು, ಸುಮ್ಮನಿರಲಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನನ್ನ ಮುಂದೆ ಅದು ಬರೆಯಲಾಗಿದೆ. ನಾನು ಸುಮ್ಮನಿರದೆ ಪ್ರತಿಫಲ ಕೊಡುತ್ತೇನೆ. ಅವರ ಮಡಿಲಲ್ಲಿ ಪ್ರತಿಫಲ ಕೊಡುತ್ತೇನೆ.