Isaiah 65:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮ ಪಾಪಗಳೂ ನಿಮ್ಮ ಪಿತೃಗಳ ಪಾಪಗಳೂ ಒಂದೇಯಾಗಿವೆ. ಇದು ಯೆಹೋವನ ನುಡಿ. ನಿಮ್ಮ ಪೂರ್ವಿಕರು ಬೆಟ್ಟಗಳ ಮೇಲೆ ಧೂಪಸುಟ್ಟು ಪಾಪಮಾಡಿದರು. ಅವರು ಆ ಬೆಟ್ಟಗಳ ಮೇಲೆ ನನ್ನನ್ನು ಅವಮಾನಪಡಿಸಿದರು. ಆದರೆ ನಾನು ಅವರನ್ನು ಮೊದಲು ಶಿಕ್ಷಿಸಿದೆನು. ಅವರಿಗೆ ತಕ್ಕ ಶಿಕ್ಷೆಯನ್ನು ಕೊಟ್ಟೆನು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರೂ ಇವರ ಪೂರ್ವಿಕರೂ ಬೆಟ್ಟಗುಡ್ಡಗಳಲ್ಲಿ ಧೂಪಹಾಕಿ, ನನ್ನನ್ನು ಹೀನೈಸಿ ನಡೆಸಿದ ಅಪರಾಧ ಕಾರ್ಯದ ಫಲವನ್ನು ಅದರ ಅಳತೆಗೆ ಸರಿಯಾಗಿ ಇವರ ಮಡಿಲಿಗೆ ಸುರಿಯುವೆನು” ಎಂದು ಯೆಹೋವನು ಹೇಳುತ್ತಾನೆ.
Kannada BSI Bible 2016
ನಿಮ್ಮ ಅಕ್ರಮಗಳಿಗೂ ನಿಮ್ಮ ತಂದೆಗಳ ಅಕ್ರ ಮಗಳಿಗೂ ಪ್ರತಿಫಲ ಕೊಡುತ್ತೇನೆಂದು ಕರ್ತನು ಹೇಳುತ್ತಾನೆ; ಅವರು ಬೆಟ್ಟಗಳ ಮೇಲೆ ಧೂಪ ಸುಟ್ಟು ಗುಡ್ಡಗಳ ಮೇಲೆ ನನ್ನನ್ನು ದೂಷಿಸಿದರಲ್ಲಾ. ಹೀಗಿರು ವದರಿಂದ ಅವರ ಹಿಂದಿನ ಕೆಲಸಗಳನ್ನು ಅವರ ಉಡಿ ಯಲ್ಲಿ ಅಳೆದುಬಿಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರೂ ಇವರ ಪಿತೃಗಳೂ ಬೆಟ್ಟಗುಡ್ಡಗಳಲ್ಲಿ ಧೂಪಹಾಕಿ ನನ್ನನ್ನು ಹೀನೈಸಿ ನಡಿಸಿದ ಅಪರಾಧಗಳ ಪ್ರತಿಫಲವನ್ನು ಇವರ ಮಡಲಿಗೆ ಹಾಕುವೆನು; ಹೌದು, ಇವರ ಕಾರ್ಯದ ಫಲವನ್ನು ಅಳತೆಗೆ ಸರಿಯಾಗಿ ಮೊಟ್ಟಮೊದಲೇ ಇವರ ಮಡಲಿಗೆ ಸುರಿಯುವೆನು ಎಂದು ಯೆಹೋವನು ಹೇಳುತ್ತಾನೆ.
Kannada Bible (KNCL) BSI 2016
ಇವರೂ ಇವರ ಪಿತೃಗಳೂ ಬೆಟ್ಟಗುಡ್ಡಗಳ ಮೇಲೆ ಧೂಪಾರತಿ ಎತ್ತಿ ನನ್ನನ್ನು ಅವಮಾನಗೊಳಿಸಿದ್ದಾರೆ. ತಕ್ಕ ಪ್ರತೀಕಾರವನ್ನು ಎಸಗುವೆನು ಈ ಅಪರಾಧಗಳಿಗೆ. ಹೌದು, ಮೊಟ್ಟಮೊದಲು ಪ್ರತೀಕಾರ ಇವರ ಕಾರ್ಯಕ್ಕೆ; ಅದನ್ನು ಸರಿಯಾಗಿ ಅಳೆದು ಸುರಿಸುವೆನು ಇವರ ಮಡಿಲಿಗೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಪಾಪಗಳಿಗೂ, ನಿಮ್ಮ ತಂದೆಗಳ ಪಾಪಗಳಿಗೂ ಕೂಡ ಪ್ರತಿಫಲ ಕೊಡುತ್ತೇನೆ” ಎಂದು ಯೆಹೋವ ದೇವರು ಹೇಳುತ್ತಾರೆ. “ಅವರು ಬೆಟ್ಟಗಳ ಮೇಲೆ ಧೂಪ ಸುಟ್ಟು, ಗುಡ್ಡಗಳ ಮೇಲೆ ನನ್ನನ್ನು ಪರಿಹಾಸ್ಯ ಮಾಡಿದರಲ್ಲಾ. ಹೀಗಿರುವುದರಿಂದ ಅವರ ಹಿಂದಿನ ಕೆಲಸಗಳನ್ನು ಅವರ ಮಡಿಲಲ್ಲಿ ಅಳೆದು ಸುರಿಸುವೆನು.”