Isaiah 65:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಹೇಳುವುದೇನೆಂದರೆ: “ದ್ರಾಕ್ಷಿಹಣ್ಣಿನಲ್ಲಿ ಹೊಸ ರಸವು ಇರುವಾಗ ಜನರು ಅದನ್ನು ಹಿಂಡಿ ರಸವನ್ನು ತೆಗೆಯುವರು. ಯಾಕೆಂದರೆ ಆ ಹಣ್ಣನ್ನು ಮತ್ತೆ ಉಪಯೋಗಿಸಬೇಕೆಂಬ ಉದ್ದೇಶದಿಂದ ಅದನ್ನು ಸಂಪೂರ್ಣವಾಗಿ ಹಾಳು ಮಾಡುವದಿಲ್ಲ. ಅದೇ ರೀತಿ ನಾನು ನನ್ನ ಸೇವಕರಿಗೂ ಮಾಡುವೆನು. ಅವರನ್ನು ನಾನು ಸಂಪೂರ್ಣವಾಗಿ ನಾಶಮಾಡುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಹೀಗನ್ನುತ್ತಾನೆ, “ರಸ ದೊರೆಯಬಹುದಾದ ದ್ರಾಕ್ಷಿಯ ಗೊಂಚಲನ್ನು ಒಬ್ಬನು ನೋಡಿ, ‘ಹಾಳುಮಾಡಬೇಡ, ಅದರಲ್ಲಿ ಪ್ರಯೋಜನವಿದೆ’ ಎನ್ನುವಂತೆ, ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು, ಇವರನ್ನೆಲ್ಲಾ ಹಾಳುಮಾಡಬಾರದು ಎಂದು ಅಂದುಕೊಳ್ಳುವೆನು,
Kannada BSI Bible 2016
ಕರ್ತನು ಹೇಳುವದೇನಂದರೆ--ದ್ರಾಕ್ಷೇಗೊನೆ ಯಲ್ಲಿ ಹೊಸದ್ರಾಕ್ಷಾರಸ ಕಂಡುಕೊಳ್ಳುವದನ್ನು ಒಬ್ಬನು ನೋಡಿ--ಕೆಡಿಸಬೇಡ, ಅದರಲ್ಲಿ ಆಶೀರ್ವಾದ ಉಂಟೆಂದು ಹೇಳುವದು ಹೇಗೋ ಹಾಗೆಯೇ ನನ್ನ ಸೇವಕರಿಗೋಸ್ಕರ ಅವರನ್ನೆಲ್ಲಾ ನಾನು ಕೆಡಿಸಿ ಬಿಡದ ಹಾಗೆ ಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಹೀಗನ್ನುತ್ತಾನೆ - ರಸ ದೊರೆಯಬಹುದಾದ ದ್ರಾಕ್ಷೆಯ ಗೊಂಚಲನ್ನು ಒಬ್ಬನು ನೋಡಿ - ಹಾಳುಮಾಡಬೇಡ, ಅದರಲ್ಲಿ ಪ್ರಯೋಜನವಿದೆ ಎನ್ನುವಂತೆ ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು ಇವರನ್ನೆಲ್ಲಾ ಹಾಳುಮಾಡಬಾರದು ಎಂದು ಅಂದುಕೊಳ್ಳುವೆನು,
Kannada Bible (KNCL) BSI 2016
ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ದ್ರಾಕ್ಷಿಯ ಗೊಂಚಲಿನಲ್ಲಿ ರಸವಿರುವ ತನಕ, ‘ಅದನ್ನು ಹಾಳುಮಾಡಬೇಡ, ಅದೊಂದು ಪ್ರಸಾದ,’ ಎನ್ನುತ್ತಾರೆ ಜನ. ಅಂತೆಯೇ ನಾನು ನನ್ನ ಭಕ್ತಾದಿಗಳನ್ನು ಲಕ್ಷ್ಯಕ್ಕೆ ತಂದುಕೊಂಡು ಜನರೆಲ್ಲರನ್ನು ಹಾಳುಮಾಡಬಾರದು ಎಂದುಕೊಂಡೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಹೀಗೆನ್ನುತ್ತಾರೆ: “ರಸ ದೊರೆಯಬಹುದಾದ ದ್ರಾಕ್ಷಿ ಗೊಂಚಲನ್ನು ಒಬ್ಬನು ನೋಡಿ, ‘ಹಾಳು ಮಾಡಬೇಡ, ಅದರಲ್ಲಿ ಪ್ರಯೋಜನವಿದೆ,’ ಎನ್ನುವಂತೆ ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು ಇವರನ್ನೆಲ್ಲಾ ಹಾಳುಮಾಡಬಾರದು ಎಂದುಕೊಳ್ಳುವೆನು.