Isaiah 66:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಹೇಳುವುದೇನೆಂದರೆ: “ಇಗೋ, ನಾನು ನಿನಗೆ ಸಮಾಧಾನವನ್ನು ಕೊಡುತ್ತೇನೆ. ಒಂದು ದೊಡ್ಡ ಹೊಳೆಯು ಹರಿಯುವಂತೆ ನಿನಗೆ ಸಮಾಧಾನವು ಹರಿದುಕೊಂಡು ಬರುವದು. ಭೂಮಿಯ ಮೇಲಿರುವ ಎಲ್ಲಾ ದೇಶಗಳ ಐಶ್ವರ್ಯವು ನಿನ್ನ ಬಳಿಗೆ ಹರಿದುಬರುವದು. ಅದು ಪ್ರವಾಹದಂತೆ ಹರಿದುಬರುವದು. ನೀವು ಸಣ್ಣ ಮಕ್ಕಳಂತೆ ಆ ಹಾಲನ್ನು ಕುಡಿಯುವಿರಿ. ನಾನು ನಿಮ್ಮನ್ನೆತ್ತಿ ಕೈಗಳಲ್ಲಿ ಅಪ್ಪಿಕೊಳ್ಳುವೆನು. ನನ್ನ ತೊಡೆಯ ಮೇಲೆ ನಿಮ್ಮನ್ನು ಕುಳ್ಳಿರಿಸಿ ಆಟವಾಡಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಹೀಗೆನ್ನುತ್ತಾನೆ, “ಇಗೋ, ನಾನು ಆಕೆಗೆ ಸುಖವನ್ನು ನದಿಯಂತೆ ದಯಪಾಲಿಸಿ, ತುಂಬಿ ತುಳುಕುವ ತೊರೆಯನ್ನೋ ಎಂಬಂತೆ ಜನಾಂಗಗಳ ವೈಭವವನ್ನು ನೀಡುವೆನು; ನೀವು ಪಾನಮಾಡುವಿರಿ; ನಿಮ್ಮನ್ನು ಕಂಕುಳಲ್ಲಿ ಎತ್ತಿಕೊಂಡು ಹೋಗುವರು, ತೊಡೆಯ ಮೇಲೆ ನಲಿದಾಡಿಸುವರು.
Kannada BSI Bible 2016
ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನದಿಯಂತೆ ಸಮಾಧಾನವನ್ನೂ ಹರಿಯುವ ಹಳ್ಳ ದಂತೆ ಜನಾಂಗಗಳ ವೈಭವವನ್ನೂ ಅವಳ ಕಡೆಗೆ ಬರಮಾಡುವೆನು; ಆಗ ನೀವು ಅವುಗಳನ್ನು ಹೀರಿ ಕೊಂಡು ಅವಳ ಪಕ್ಕೆಗಳಲ್ಲಿ ಹೊರಲ್ಪಡುವಿರಿ, ಅವಳ ಮೊಣಕಾಲುಗಳ ಮೇಲೆ ಆಡಿಸಲ್ಪಡುವಿರಿ,
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಹೀಗನ್ನುತ್ತಾನೆ - ಇಗೋ, ನಾನು ಆಕೆಗೆ ಸುಖವನ್ನು ನದಿಯಂತೆ ದಯಪಾಲಿಸಿ ತುಂಬಿ ತುಳುಕುವ ತೊರೆಯನ್ನೋ ಎಂಬಂತೆ ಜನಾಂಗಗಳ ವೈಭವವನ್ನು ನೀಡುವೆನು; ನೀವು ಪಾನಮಾಡುವಿರಿ; ನಿಮ್ಮನ್ನು ಕಂಕುಳಲ್ಲಿ ಎತ್ತಿಕೊಂಡು ಹೋಗುವರು, ತೊಡೆಯ ಮೇಲೆ ನಲಿದಾಡಿಸುವರು.
Kannada Bible (KNCL) BSI 2016
ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ಇಗೋ, ಆಕೆಗೆ ಹರಿಯಮಾಡುವೆನು ಸುಖಶಾಂತಿಯನು ನದಿಯಂತೆ ನೀಡುವೆ ರಾಷ್ಟ್ರಗಳ ವೈಭವವನು ತುಂಬಿತುಳುಕುವ ತೊರೆಯಂತೆ ನೀವಿರುವಿರಿ ಹಾಲುಕುಡಿವ ಹಸುಳೆಯಂತೆ ಎತ್ತಿಕೊಳ್ಳಲಾಗುವುದು ನಿಮ್ಮನ್ನು ತಾಯ ಕಂಕುಳಲಿ ನಲಿದಾಡುವಿರಿ ನೀವು ಆಕೆಯ ಮಡಿಲಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ನದಿಯಂತೆ ಸಮಾಧಾನವನ್ನೂ, ಹರಿಯುವ ಹಳ್ಳದಂತೆ ಜನಾಂಗಗಳ ವೈಭವವನ್ನೂ ಆಕೆಯ ಕಡೆಗೆ ಬರಮಾಡುವೆನು. ಆಗ ನೀವು ಪಾನ ಮಾಡುವಿರಿ; ನಿಮ್ಮನ್ನು ಆಕೆಯ ಪಕ್ಕೆಯಲ್ಲಿ ಎತ್ತಿಕೊಂಡುಹೋಗುವರು. ನೀವು ಆಕೆಯ ಮಡಿಲಲ್ಲಿ ನಲಿದಾಡುವಿರಿ.