Isaiah 66:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮನ್ನು ಹರ್ಷಗೊಳಿಸುವಂಥ ಸಂಗತಿಗಳನ್ನು ನೀವು ನೋಡುವಿರಿ. ನೀವು ಸ್ವತಂತ್ರರಾಗಿದ್ದು ಹುಲ್ಲಿನಂತೆ ಹುಲುಸಾಗಿ ಬೆಳೆಯುವಿರಿ. ಯೆಹೋವನ ಸೇವಕರು ಆತನ ಶಕ್ತಿಯನ್ನು ನೋಡುವರು. ಆದರೆ ಯೆಹೋವನ ವೈರಿಗಳು ಆತನ ಕೋಪವನ್ನು ಕಾಣುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಇದನ್ನು ಕಣ್ಣಾರೆ ಕಾಣುವಿರಿ, ನಿಮ್ಮ ಹೃದಯವು ಉಲ್ಲಾಸಿಸುವುದು, ನಿಮ್ಮ ಎಲುಬುಗಳು ಹಸಿ ಹುಲ್ಲಿನಂತೆ ರಸವತ್ತಾಗುವವು; ಆಗ ಯೆಹೋವನು ತನ್ನ ಸೇವಕರ ಮೇಲೆ ಕೃಪಾಹಸ್ತವನ್ನು ವ್ಯಕ್ತಪಡಿಸಿ ತನ್ನ ಶತ್ರುಗಳ ಮೇಲೆ ರೋಷಗೊಳ್ಳುವನು.
Kannada BSI Bible 2016
ನೀವು ಅದನ್ನು ನೋಡುವಾಗ ನಿಮ್ಮ ಹೃದಯವು ಸಂತೋಷಿಸುವದು, ನಿಮ್ಮ ಎಲುಬು ಗಳು ಹಸಿರು ಪಲ್ಯದ ಹಾಗೆ ಚಿಗುರುವವು; ಕರ್ತನ ಕೈ ಆತನ ಸೇವಕನ ಕಡೆಗೂ ಆತನ ರೌದ್ರವು ಆತನ ಶತ್ರುಗಳ ಕಡೆಗೂ ಕಾಣಬರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಇದನ್ನು ಕಣ್ಣಾರೆ ಕಾಣುವಿರಿ, ನಿಮ್ಮ ಹೃದಯವು ಉಲ್ಲಾಸಿಸುವದು, ನಿಮ್ಮ ಎಲುಬುಗಳು ಹಸಿಹುಲ್ಲಿನಂತೆ ರಸವತ್ತಾಗುವವು; ಆಗ ಯೆಹೋವನು ತನ್ನ ಸೇವಕರ ಮೇಲೆ ಕೃಪಾಹಸ್ತವನ್ನು ವ್ಯಕ್ತಪಡಿಸಿ ತನ್ನ ಶತ್ರುಗಳ ಮೇಲೆ ರೋಷಗೊಳ್ಳುವನು.
Kannada Bible (KNCL) BSI 2016
ಇದನ್ನು ಕಂಡಾಗ ನಿಮ್ಮೆದೆ ಸಂತಸದಿಂದ ಉಬ್ಬುವುದು ಚಿಗುರುವುದು ಹಸಿಹುಲ್ಲಂತೆ ನಿಮ್ಮೆಲುಬು. ‘ಸರ್ವೇಶ್ವರನ ಕೃಪಾಹಸ್ತ ತನ್ನ ಭಕ್ತರ ಮೇಲೆ ಆತನ ರೋಷಾವೇಶ ಶತ್ರುಗಳ ಮೇಲೆ’ ಎಂಬುವುದು ವ್ಯಕ್ತವಾಗುವುದು ನಿಮಗೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಅದನ್ನು ಕಾಣುವಾಗ, ನಿಮ್ಮ ಹೃದಯವು ಸಂತೋಷಿಸುವುದು. ನಿಮ್ಮ ಎಲುಬುಗಳು ಹಸಿರು ಹುಲ್ಲಿನ ಹಾಗೆ ಚಿಗುರುವುವು. ಯೆಹೋವ ದೇವರ ಕೈ ತಮ್ಮ ಸೇವಕರ ಮೇಲೆಯೂ, ಅವರ ರೌದ್ರವು ತಮ್ಮ ಶತ್ರುಗಳ ಮೇಲೆ ಕಾಣಬರುವುದು.