Isaiah 66:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಗೋ, ಯೆಹೋವನು ಬೆಂಕಿಯೊಂದಿಗೆ ಬರುತ್ತಿದ್ದಾನೆ. ಯೆಹೋವನ ಸೈನ್ಯಗಳು ಧೂಳಿನ ಮೋಡಗಳೊಂದಿಗೆ ಬರುತ್ತಿವೆ. ಯೆಹೋವನು ತನ್ನ ಕೋಪದಿಂದ ಆ ಜನರನ್ನು ಶಿಕ್ಷಿಸುವನು. ಯೆಹೋವನು ಕೋಪದಲ್ಲಿರುವಾಗ ಬೆಂಕಿಯ ನಾಲಿಗೆಗಳಿಂದ ಅವರನ್ನು ಶಿಕ್ಷಿಸುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, ಯೆಹೋವನು ಬೆಂಕಿಯನ್ನು ಕಟ್ಟಿಕೊಂಡು ಬರುವನು; ಆತನ ರಥಗಳು ಬಿರುಗಾಳಿಯಂತಿರುವವು; ರೌದ್ರಾವೇಶದಿಂದ ತನ್ನ ಸಿಟ್ಟನ್ನು ತೀರಿಸುವನು, ಅಗ್ನಿ ಜ್ವಾಲೆಯಿಂದ ಖಂಡಿಸುವನು.
Kannada BSI Bible 2016
ಇಗೋ, ಕರ್ತನು ಬೆಂಕಿಯೊಡನೆ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವವು; ಉಗ್ರದಿಂದ ತನ್ನ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತನ್ನ ಗದರಿಕೆ ಯನ್ನೂ ಸಲ್ಲಿಸುವದಕ್ಕಾಗಿಯೇ ಬರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ಯೆಹೋವನು ಬೆಂಕಿಯನ್ನು ಕಟ್ಟಿಕೊಂಡು ಬರುವನು; ಆತನ ರಥಗಳು ಬಿರುಗಾಳಿಯಂತಿರುವವು; ರೌದ್ರಾವೇಶದಿಂದ ತನ್ನ ಸಿಟ್ಟನ್ನು ತೀರಿಸುವನು, ಅಗ್ನಿಜ್ವಾಲೆಯಿಂದ ಖಂಡಿಸುವನು.
Kannada Bible (KNCL) BSI 2016
ಸರ್ವೇಶ್ವರ ಬರುವನಿದೋ ಅಗ್ನಿಮಯನಾಗಿ ಆತನ ರಥಗಳು ಬಿರುಗಾಳಿಯಂತೆ ರಭಸವಾಗಿ ತೋರಿಸುವನು ತನ್ನ ಸಿಟ್ಟನ್ನು ರೌದ್ರವೇಶದಿಂದ ಖಂಡಿಸುವನು ಧಗಧಗಿಸುವ ಜ್ವಾಲೆಯಿಂದ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಬೆಂಕಿಯೊಡನೆ ಬರುವರು. ಅವರ ರಥಗಳು ಬಿರುಗಾಳಿಯ ಹಾಗೆ ಇರುವುವು. ಕಠಿಣವಾದ ತಮ್ಮ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತಮ್ಮ ಗದರಿಕೆಯನ್ನೂ ಸಲ್ಲಿಸುವುದಕ್ಕಾಗಿಯೇ ಬರುವರು.