Isaiah 66:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಜನರಿಗೆ ನ್ಯಾಯತೀರ್ಪು ಮಾಡುವನು. ಆ ಬಳಿಕ ಯೆಹೋವನು ಜನರನ್ನು ಬೆಂಕಿಯಿಂದಲೂ ಖಡ್ಗದಿಂದಲೂ ನಾಶಮಾಡುವನು. ಯೆಹೋವನು ಅನೇಕಾನೇಕ ಜನರನ್ನು ನಾಶಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಅಗ್ನಿಯಿಂದಲೂ ಮತ್ತು ತನ್ನ ಖಡ್ಗದಿಂದಲೂ ಎಲ್ಲಾ ನರಜನ್ಮದವರಿಗೂ ನ್ಯಾಯತೀರಿಸುವನು; ಆಗ ಆತನಿಂದ ಹತರಾಗುವವರು ಬಹು ಜನರು.
Kannada BSI Bible 2016
ಬೆಂಕಿ ಯಿಂದಲೂ ತನ್ನ ಕತ್ತಿಯಿಂದಲೂ ಕರ್ತನು ಮನುಷ್ಯ ರಿಗೆಲ್ಲಾ ನ್ಯಾಯತೀರಿಸುವನು; ಕರ್ತನಿಂದ ಕೊಲ್ಲಲ್ಪಟ್ಟ ವರು ಅನೇಕರಾಗಿರುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಅಗ್ನಿಯಿಂದಲೂ ತನ್ನ ಖಡ್ಗದಿಂದಲೂ ಎಲ್ಲಾ ನರಜನ್ಮದವರಿಗೂ ನ್ಯಾಯತೀರಿಸುವನು; ಆಗ ಆತನಿಂದ ಹತರಾಗುವವರು ಬಹುಜನ.
Kannada Bible (KNCL) BSI 2016
ನ್ಯಾಯ ತೀರಿಸುವನು ಸರ್ವೇಶ್ವರ ಮನುಜರಿಗೆಲ್ಲ ಅಗ್ನಿಯಿಂದ, ತನ್ನ ಖಡ್ಗದಿಂದ. ಹತರಾಗುವರು ಬಹುಜನ ಆತನಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಬೆಂಕಿಯಿಂದಲೂ ತಮ್ಮ ಖಡ್ಗದಿಂದಲೂ ಯೆಹೋವ ದೇವರು ಮನುಷ್ಯರಿಗೆಲ್ಲಾ ನ್ಯಾಯತೀರಿಸುವರು. ಯೆಹೋವ ದೇವರಿಂದ ಹತರಾಗುವವರು ಅನೇಕರಾಗಿರುವರು.