Isaiah 66:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ತಮ್ಮ ವಿಶೇಷವಾದ ತೋಟದೊಳಗೆ ಪೂಜೆಮಾಡಲು ತಮ್ಮನ್ನು ಶುದ್ಧಮಾಡಿಕೊಳ್ಳುವಂತೆ ಸ್ನಾನಮಾಡುವರು. ತಮ್ಮ ವಿಶೇಷ ತೋಟದೊಳಗೆ ಹೋಗಲು ಒಬ್ಬರನ್ನೊಬ್ಬನು ಹಿಂಬಾಲಿಸುವರು. ಅಲ್ಲಿ ಅವರ ವಿಗ್ರಹಗಳನ್ನು ಪೂಜಿಸುವರು. ಆದರೆ ಯೆಹೋವನು ಅವರೆಲ್ಲರನ್ನು ನಾಶಮಾಡುವನು. “ಆ ಜನರು ಹಂದಿ, ಇಲಿ ಮತ್ತು ಇತರ ಅಶುದ್ಧ ಪ್ರಾಣಿಗಳ ಮಾಂಸವನ್ನು ತಿನ್ನುತ್ತಾರೆ. ಆದರೆ ಅವರೆಲ್ಲರೂ ಒಟ್ಟಾಗಿ ನಾಶವಾಗುವರು.” ಇದು ಯೆಹೋವನು ಹೇಳಿದ ಮಾತುಗಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಮ್ಮ ಮಧ್ಯದಲ್ಲಿನ ಒಬ್ಬನನ್ನು ಅನುಸರಿಸಿ, ತೋಟಗಳೊಳಗೆ ಪ್ರವೇಶಿಸುವುದಕ್ಕೆ ತಮ್ಮನ್ನು ಪವಿತ್ರಮಾಡಿಕೊಂಡು, ಹಂದಿಯ ಮಾಂಸವನ್ನು, ಅಶುದ್ಧಪದಾರ್ಥವನ್ನೂ, ಇಲಿಯನ್ನೂ ತಿನ್ನುವವರು ಒಟ್ಟಿಗೆ ಅಂತ್ಯ ಕಾಣುವರು” ಎಂದು ಯೆಹೋವನು ನುಡಿಯುತ್ತಾನೆ.
Kannada BSI Bible 2016
ತೋಟಗಳ ಮಧ್ಯದಲ್ಲಿ ಒಂದು ಮರದ ಹಿಂದೆ ತಮ್ಮನ್ನು ಪರಿಶುದ್ಧ ಮಾಡಿ ಕೊಂಡು ಪವಿತ್ರಮಾಡಿಕೊಳ್ಳುವವರೂ ಹಂದಿ ಮಾಂಸವನ್ನೂ ಅಸಹ್ಯವಾದದ್ದನ್ನೂ ಇಲಿಯನ್ನೂ ತಿನ್ನು ವವರೂ ಒಟ್ಟಾಗಿ ದಹಿಸಲ್ಪಡುವರು ಎಂದು ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ತೋಟಗಳೊಳಗೆ ಪ್ರವೇಶಿಸುವದಕ್ಕೆ ತಮ್ಮ ಮಧ್ಯದಲ್ಲಿನ ಒಬ್ಬನ ಅಂಗಾಭಿನಯವನ್ನು ಅನುಸರಿಸಿ ತಮ್ಮನ್ನು ಶುದ್ಧೀಕರಿಸಿ ಪವಿತ್ರಮಾಡಿಕೊಂಡು ಹಂದಿಯ ಮಾಂಸವನ್ನೂ ಅಶುದ್ಧಪದಾರ್ಥವನ್ನೂ ಇಲಿಯನ್ನೂ ತಿನ್ನುವವರು ಒಟ್ಟಿಗೆ ಕೊನೆಗಾಣುವರು ಎಂದು ಯೆಹೋವನು ನುಡಿಯುತ್ತಾನೆ.
Kannada Bible (KNCL) BSI 2016
“ತಮ್ಮ ಮಧ್ಯಸ್ಥನ ಮಾತಿನ ಪ್ರಕಾರ, ತೋಪುಗಳನ್ನು ಪ್ರವೇಶಿಸಿ, ಒಬ್ಬನ ಹಿಂದೊಬ್ಬರು ತಮ್ಮನ್ನೇ ಶುದ್ಧೀಕರಿಸಿ, ಪವಿತ್ರೀಕರಿಸಿಕೊಂಡು, ಹಂದಿಯ ಮಾಂಸವನ್ನೂ ಅಸಹ್ಯಪದಾರ್ಥಗಳನ್ನೂ ಇಲಿಗಳನ್ನೂ ತಿನ್ನುವ ಜನರು ಒಟ್ಟಿಗೇ ಕೊನೆಗಾಣುವರು.” ಇದು ಸರ್ವೇಶ್ವರ ಸ್ವಾಮಿಯ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ತೋಟಗಳಲ್ಲಿ ಒಬ್ಬರ ಹಿಂದೊಬ್ಬರು ಮಧ್ಯದಲ್ಲಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು, ಪವಿತ್ರ ಮಾಡಿಕೊಳ್ಳುವವರೂ; ಹಂದಿ ಮಾಂಸವನ್ನೂ, ಅಸಹ್ಯವಾದದ್ದನ್ನೂ, ಇಲಿಯನ್ನೂ ತಿನ್ನುವವರು ಒಟ್ಟಾಗಿ ದಹಿಸಿ ಹೋಗುವರು,” ಎಂದು ಯೆಹೋವ ದೇವರು ಹೇಳುತ್ತಾರೆ.