Isaiah 66:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರಲ್ಲಿ ಕೆಲವರಿಗೆ ನಾನು ಗುರುತು ಹಾಕುವೆನು. ನಾನು ಅವರನ್ನು ರಕ್ಷಿಸುವೆನು. ರಕ್ಷಿಸಲ್ಪಟ್ಟ ಕೆಲವರನ್ನು ನಾನು ತಾರ್ಷೀಷ್, ಲಿಬ್ಯ, ಲೂದ್, ತೂಬಾಲ್, ಗ್ರೀಸ್ ಮತ್ತು ದೂರದೇಶಗಳಿಗೆ ಕಳುಹಿಸುವೆನು. ಅಲ್ಲಿಯ ಜನರು ನನ್ನ ಬೋಧನೆಯನ್ನು ಎಂದೂ ಕೇಳಿರಲಿಲ್ಲ. ಅವರು ನನ್ನ ಮಹಿಮೆಯನ್ನು ಎಂದೂ ಕಂಡಿರಲಿಲ್ಲ. ಆದ್ದರಿಂದ ರಕ್ಷಿಸಲ್ಪಟ್ಟ ಜನರು ನನ್ನ ಮಹಿಮೆಯನ್ನು ಅವರಿಗೆ ತಿಳಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ, ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.”
Kannada BSI Bible 2016
ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪ ನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.
Kannada Bible (KNCL) BSI 2016
ಅವರ ಮಧ್ಯೆ ಒಂದು ಸೂಚಕಕಾರ್ಯವನ್ನು ಮಾಡುವೆನು. ಅವರಲ್ಲಿ ಅಳಿದುಳಿದವರನ್ನು ನನ್ನ ಸುದ್ದಿಯನ್ನು ಕೇಳದೆಯೂ ನನ್ನ ಮಹಿಮೆಯನ್ನು ಕಾಣದೆಯೂ ಇರುವವರ ಬಳಿಗೆ ಕಳಿಸುವೆನು. ತಾರ್ಷೀಷ್, ಲಿಬಿಯಾ, ಧನುರ್ಧಾರಿಗಳಾದ ಲೂದಿಯಾ, ತೂಬಲ್, ಗ್ರೀಸ್ ಎಂಬ ನಾಡುಗಳಿಗೂ ದೂರದ ದ್ವೀಪನಿವಾಸಿಗಳ ಬಳಿಗೂ ಕಳಿಸುವೆನು. ಈ ಅನ್ಯಜನಾಂಗಗಳಿಗೆ ಅವರು ನನ್ನ ಮಹಿಮೆಯನ್ನು ಪ್ರಕಟಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅವರ ಮಧ್ಯದಲ್ಲಿ ಗುರುತನ್ನಿಟ್ಟು, ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ, ತಾರ್ಷೀಷ್, ಪೂಲ್, ಬಿಲ್ಲು ಪ್ರಯೋಗಿಸುವುದರಲ್ಲಿ ಪ್ರವೀಣರಾದ ಲೂದ್, ತೂಬಲ್, ಗ್ರೀಸ್ ಎಂಬ ನಾಡುಗಳಿಗೂ ನನ್ನ ಸಮಾಚಾರವನ್ನು ಕೇಳದ ನನ್ನ ಮಹಿಮೆಯನ್ನು ಕಾಣದೆ ಇರುವ ದೂರ ದ್ವೀಪನಿವಾಸಿಗಳಿಗೂ ಕಳುಹಿಸುವೆನು. ಅವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.