Isaiah 66:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನೇ ಎಲ್ಲವನ್ನು ಉಂಟುಮಾಡಿದೆನು. ನಾನು ಸೃಷ್ಟಿಸಿದ್ದರಿಂದ ಅವು ಅಸ್ತಿತ್ವದಲ್ಲಿವೆ.” ಇವು ಯೆಹೋವನ ನುಡಿಗಳು. “ಎಂಥ ಜನರನ್ನು ನಾನು ಪರಿಪಾಲಿಸುತ್ತೇನೆಂದು ಕೇಳುವಿರಾ? ಬಡವರ ವಿಷಯದಲ್ಲಿ ನಾನು ಚಿಂತಿಸುತ್ತೇನೆ. ದುಃಖಿಸುವ ಜನರಿಗಾಗಿ ನಾನು ಚಿಂತಿಸುತ್ತೇನೆ. ನನ್ನ ಮಾತುಗಳಿಗೆ ವಿಧೇಯರಾಗುವವರಿಗಾಗಿ ನಾನು ಚಿಂತಿಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.
Kannada BSI Bible 2016
ಇವುಗಳ ನ್ನೆಲ್ಲಾ ನನ್ನ ಕೈ ಉಂಟುಮಾಡಿತು; ಇವುಗಳೆಲ್ಲಾ ಇದ್ದವೆಂದು ಕರ್ತನು ಅನ್ನುತ್ತಾನೆ. ಆದರೆ ಇವನ ಮೇಲೆ ದೃಷ್ಟಿ ಇಡುವೆನು ದೀನನೂ ಜಜ್ಜಿದ ಆತ್ಮವುಳ್ಳ ವನೂ ನನ್ನ ವಾಕ್ಯಕ್ಕೆ ನಡುಗುವವನೂ ಯಾವನೋ ಅವನ ಮೇಲೆಯೂ ದೃಷ್ಟಿ ಇಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, [ನನ್ನ ಕೈಯಿಂದಲೇ] ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.
Kannada Bible (KNCL) BSI 2016
ಇವುಗಳನ್ನೆಲ್ಲ ನಿರ್ಮಿಸಿದ್ದು ನನ್ನ ಕೈಯೇ. ಹೌದು, ಇವುಗಳೆಲ್ಲ ಆದುವು ನನ್ನಿಂದಲೇ. ವಿನಮ್ರನು, ಪಶ್ಚಾತ್ತಾಪ ಪಡುವವನು, ನನ್ನ ಮಾತಿನಲ್ಲಿ ಭಯಭಕ್ತಿಯುಳ್ಳವನು, ಇಂಥವರೇ ನನಗೆ ಮೆಚ್ಚುಗೆಯಾದವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವುಗಳನ್ನೆಲ್ಲಾ ನಿರ್ಮಿಸಿದ್ದು ನನ್ನ ಕೈಯೇ. ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಕಟಾಕ್ಷಿಸುವವನು ಎಂಥವನೆಂದರೆ: ದೀನನೂ, ಮನಮುರಿದವನೂ, ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.