Isaiah 66:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ನಿಮ್ಮ ಸಹೋದರಸಹೋದರಿಯರನ್ನು ಎಲ್ಲಾ ಜನಾಂಗಗಳೊಳಗಿಂದ ಕರೆದುಕೊಂಡು ನನ್ನ ಪವಿತ್ರ ಪರ್ವತವಾದ ಜೆರುಸಲೇಮಿಗೆ ಬರುವರು. ನಿನ್ನ ಸಹೋದರಸಹೋದರಿಯರು ಕುದುರೆ, ಕತ್ತೆ, ಒಂಟೆ, ರಥ ಮತ್ತು ಗಾಡಿಗಳಲ್ಲಿ ಕುಳಿತುಕೊಂಡು ಬರುವರು. ಯೆಹೋವನ ಮಂದಿರದೊಳಗೆ ಶುದ್ಧವಾದ ತಟ್ಟೆಯ ಮೇಲೆ ಕಾಣಿಕೆಗಳನ್ನು ತರುವಂತೆಯೇ ನಿನ್ನ ಸಹೋದರ ಸಹೋದರಿಯರಾದ ಇಸ್ರೇಲರು ಬರುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಹೀಗೆನ್ನುತ್ತಾನೆ, “ಇಸ್ರಾಯೇಲರು ಯೆಹೋವನ ಆಲಯಕ್ಕೆ ಶುದ್ಧಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವ ಪ್ರಕಾರ ಸಮಸ್ತ ಜನಾಂಗಗಳಲ್ಲಿ ಚದರಿಹೋಗಿರುವ ನಮ್ಮ ಸಹೋದರರನ್ನು ಕುದುರೆ, ತೇರು, ಪಲ್ಲಕಿ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಯೆಹೋವನ ನೈವೇದ್ಯಕ್ಕಾಗಿ ಯೆರೂಸಲೇಮೆಂಬ ನನ್ನ ಪರಿಶುದ್ಧಪರ್ವತಕ್ಕೆ ಕರೆತರುವರು.
Kannada BSI Bible 2016
ಅವರು ನಿಮ್ಮ ಸಹೋದರರನ್ನು ಕುದುರೆಗಳ ಮೇಲೆಯೂ ರಥ ಗಳಲ್ಲಿಯೂ ಪಾಲ್ಕಿಗಳಲ್ಲಿಯೂ ಹೇಸರ ಕತ್ತೆಗಳ ಮೇಲೆಯೂ ವೇಗವಾಗಿ ಹೋಗುವ ಪ್ರಾಣಿಗಳ ಮೇಲೆಯೂ ಸಮಸ್ತ ಜನಾಂಗಗಳೊಳಗಿಂದ ಕರ್ತ ನಿಗೆ ಕಾಣಿಕೆಯಾಗಿ ಇಸ್ರಾಯೇಲಿನ ಮಕ್ಕಳು ಕಾಣಿಕೆ ಯನ್ನು ಶುದ್ಧ ಪಾತ್ರೆಯಲ್ಲಿ ಕರ್ತನ ಮನೆಗೆ ತರುವ ಪ್ರಕಾರ ನನ್ನ ಪರಿಶುದ್ಧ ಪರ್ವತವಾದ ಯೆರೂಸ ಲೇಮಿಗೆ ತರುವರೆಂದು ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಹೀಗನ್ನುತ್ತಾನೆ - ಇಸ್ರಾಯೇಲ್ಯರು ಯೆಹೋವನ ಆಲಯಕ್ಕೆ ಶುದ್ಧ ಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವ ಪ್ರಕಾರ ಸಮಸ್ತಜನಾಂಗಗಳಲ್ಲಿ ಚದರಿಹೋಗಿರುವ ನಮ್ಮ ಸಹೋದರರನ್ನು ಕುದುರೆ, ತೇರು, ಪಾಲಕಿ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಯೆಹೋವನ ನೈವೇದ್ಯಕ್ಕಾಗಿ ಯೆರೂಸಲೇಮೆಂಬ ನನ್ನ ಪರಿಶುದ್ಧ ಪರ್ವತಕ್ಕೆ ಕರತರುವರು.
Kannada Bible (KNCL) BSI 2016
ನನಗೆ ಕಾಣಿಕೆಯಾಗಿ ಎಲ್ಲ ಜನಾಂಗಗಳಿಂದ ನಿಮ್ಮ ಸಹೋದರರನ್ನು ಕರೆದುತರುವರು. ಇಸ್ರಯೇಲರು ನನ್ನ ಆಲಯಕ್ಕೆ ಶುದ್ಧ ಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವಂತೆ, ಅವರನ್ನು ಕುದುರೆ, ತೇರು, ಪಲ್ಲಕ್ಕಿ, ಹೇಸರಗತ್ತೆ, ಒಂಟೆ, ಇವುಗಳ ಮೇಲೆ ಏರಿಸಿಕೊಂಡು ಜೆರುಸಲೇಮೆಂಬ ನನ್ನ ಪವಿತ್ರ ಪರ್ವತಕ್ಕೆ ಕರೆದುತರುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನಿಮ್ಮ ಸಹೋದರರನ್ನು ಕುದುರೆಗಳ ಮೇಲೆಯೂ ರಥಗಳಲ್ಲಿಯೂ ಪಲ್ಲಕ್ಕಿಗಳಲ್ಲಿಯೂ ಹೇಸರಗತ್ತೆಗಳ ಮೇಲೆಯೂ ಒಂಟೆಗಳ ಮೇಲೆಯೂ ಸಮಸ್ತ ಜನಾಂಗಗಳೊಳಗಿಂದ ಯೆಹೋವ ದೇವರಿಗೆ ಕಾಣಿಕೆಯಾಗಿ ಇಸ್ರಾಯೇಲರು ಕಾಣಿಕೆಯನ್ನು ಶುದ್ಧಪಾತ್ರೆಯಲ್ಲಿ ಯೆಹೋವ ದೇವರು ಮನೆಗೆ ತರುವ ಪ್ರಕಾರ ನನ್ನ ಪರಿಶುದ್ಧ ಪರ್ವತವಾದ ಯೆರೂಸಲೇಮಿಗೆ ತರುವರೆಂದು ಯೆಹೋವ ದೇವರು ಹೇಳುತ್ತಾರೆ.