Isaiah 66:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರತಿಯೊಂದು ಆರಾಧನಾ ದಿನದಲ್ಲಿ ಪ್ರತಿಯೊಬ್ಬರೂ ಬಂದು ನನ್ನನ್ನು ಆರಾಧಿಸುವರು. ಪ್ರತಿಯೊಂದು ಸಬ್ಬತ್ ದಿನದಲ್ಲೂ ತಿಂಗಳ ಮೊದಲ ದಿನದಲ್ಲೂ ಅವರು ನನ್ನ ಬಳಿಗೆ ಬರುವರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ, ಒಂದೊಂದು ಸಬ್ಬತ್ ದಿನದಲ್ಲಿಯೂ, ಸಕಲ ನರಜನ್ಮದವರೂ ನನ್ನ ಸನ್ನಿಧಿಯಲ್ಲಿ ಆರಾಧಿಸುವುದಕ್ಕೆ ಬರುವರು” ಇದು ಯೆಹೋವನ ನುಡಿ.
Kannada BSI Bible 2016
ಇದಾದ ಮೇಲೆ ಒಂದು ಅಮಾವಾಸ್ಯೆಯಿಂದ ಇನ್ನೊಂದಕ್ಕೂ ಒಂದು ಸಬ್ಬತ್ತಿನಿಂದ ಇನ್ನೊಂದಕ್ಕೂ ಮನುಷ್ಯರೆಲ್ಲಾ ನನ್ನ ಮುಂದೆ ಆರಾಧಿಸುವದಕ್ಕೆ ಬರುವರೆಂದು ಕರ್ತನು ಹೇಳುತ್ತಾನೆ.ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹ ಮಾಡಿದ ಮನುಷ್ಯರ ಹೆಣಗಳನ್ನು ನೋಡುವರು; ಯಾಕಂದರೆ ಅವರ ಹುಳ ಸಾಯುವದಿಲ್ಲ; ಅವರ ಬೆಂಕಿ ಆರುವದಿಲ್ಲ; ಅವರು ಎಲ್ಲಾ ಮನುಷ್ಯರಿಗೆ ಹೇಸಿಕೆಯಾಗುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ ಒಂದೊಂದು ಸಬ್ಬತ್ ದಿನದಲ್ಲಿಯೂ ಸಕಲ ನರಜನ್ಮದವರೂ ನನ್ನ ಸನ್ನಿಧಿಯಲ್ಲಿ ಎರಗುವದಕ್ಕೆ ಬರುವರು; ಇದು ಯೆಹೋವನ ನುಡಿ.
Kannada Bible (KNCL) BSI 2016
ಅಮವಾಸ್ಯೆಯಿಂದ ಅಮವಾಸ್ಯೆಯವರೆಗೆ ಸಬ್ಬತ್‍ದಿನದಿಂದ ಸಬ್ಬತ್‍ದಿನದವರೆಗೆ ಮನುಜರೆಲ್ಲರು ಬರುವರು ನನ್ನನ್ನು ಆರಾಧಿಸಲಿಕ್ಕೆ.” ಇದು ಸರ್ವೇಶ್ವರ ಸ್ವಾಮಿಯ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಾದ ಮೇಲೆ, “ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ ಒಂದೊಂದು ಸಬ್ಬತ್ ದಿನದಲ್ಲಿಯೂ ಮನುಷ್ಯರೆಲ್ಲಾ ನನ್ನ ಮುಂದೆ ಆರಾಧಿಸುವುದಕ್ಕೆ ಬರುವರು” ಎಂದು ಯೆಹೋವ ದೇವರು ಹೇಳುತ್ತಾರೆ.